ರಾಜ್ಯ ಸುದ್ದಿ
ಶಿರಸಿ: ನಗರದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್‍ನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿತರಿಸಿದರು. ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಇಲಾಖೆಯಡಿಯಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಮತ್ತು ಕೊವಿಡ್ ನಿಂಯತ್ರಣದ ಕುರಿತಾಗಿ ಗ್ರಾಮೀಣ ಭಾಗದಲ್ಲಿ ಪಂಚಾಯತಗಳು ಕೈಗೊಂಡ ಕ್ರಮಗಳ ಬಗ್ಗೆ ಶಿರಸಿ-ಸಿದ್ದಾಪುರ ಶಾಸಕ, ಸ್ಪೀಕರ್ ವಿಶ್ವೇಶ್ವರ ಹೆಗಡೆಯವರೊಡನೆ ಚರ್ಚಿಸಿ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಸರಳೀಕರಣಗೊಳಿಸಿ ಜಿಲ್ಲೆಯಲ್ಲಿ ಅಡಿಕೆ ತೋಟಗಳನ್ನು ಅವಲಂಬಿಸಿರುವ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಕೋರಿದರು. ಸಚಿವ ಈಶ್ವರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಮತ್ತು ಜಿಲ್ಲೆಯ ಹಾಗೂ ಶಿರಸಿ ಸಿದ್ದಾಪುರ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಇ ಸ್ವತ್ತಿನ ಸಮಸ್ಯೆ, ಹಾಗೂ ಅವಶ್ಯವಿರುವ ಕಿರುಸೇರುವೆ ಮತ್ತು ಕಾಲುಸಂಕಗಳು ಹಾಗೂ ಗ್ರಾಮೀಣ ರಸ್ತೆಗಳ ನಿರ್ಮಾಣ, ಗ್ರಾಮೀಣ ಭಾಗದ ಕೆರೆಗಳ ಸುಧಾರಣೆಯ ಕುರಿತಾಗಿ ಚರ್ಚಿಸಿದರು. ಹಾಗೂ . ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರಾದ ಸುನಿಲ್ ನಾಯ್ಕ್, ದಿನಕರ ಶೆಟ್ಟಿ ಮತ್ತು ಶಾಂತಾರಾಮ ಸಿದ್ದಿ ಸಭೆಯಲ್ಲಿ ಉಪಸ್ಥಿತರಿದ್ದರು.
Be the first to comment