ಶರಾವತಿ ಎಡದಂಡೆ-ಮಂಕಿ ಭಾಗಕ್ಕೆ ಶಾಶ್ವತ ಕುಡಿಯುವ ನೀರು ಯೋಜನೆ; ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಸುನೀಲ್‍ನಾಯ್ಕ್

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಹೊನ್ನಾವರ: ಇಲ್ಲಿನ ಶರಾವತಿ ಎಡದಂಡೆ ಹಾಗೂ ಮಂಕಿ ಭಾಗಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗಿದೆ. ಸುಮಾರು 115 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದ್ದು ಈ ಕುರಿತು ಸರ್ವೆ ಕಾರ್ಯಕ್ಕಾಗಿ 50 ಲಕ್ಷ ರೂಪಾಯಿಗಳನ್ನು ಮಂಜೂರಿ ಮಾಡಲಾಗಿದೆ ಎಂದು ಹೊನ್ನಾವರ-ಭಟ್ಕಳ ಶಾಸಕ ಸುನೀಲ ನಾಯ್ಕ ಹೇಳಿದರು.

ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಇಲಾಖಾ ಅಧಿಕಾರಿಗಳು ಆಗಮಿಸಿದ್ದು ಅವರೊಂದಿಗೆ ಶಾಸಕ ಸುನೀಲ್ ನಾಯ್ಕ ಸಭೆ ನಡೆಸಿ ಮಾಹಿತಿ ಪಡೆದರು. ಹಾಗೂ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

Be the first to comment

Leave a Reply

Your email address will not be published.


*