ಮುರಿದು ಬಿದ್ದ ಸರ್ಕಾರಿ ಕಾಲೇಜು ಮೇಲ್ಛಾವಣಿ; ಶಾಸಕ ದಿನಕರ ಶೆಟ್ಟಿ ಭೇಟಿ ಪರಿಶೀಲನೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULU

ಕುಮಟಾ: ವಿಪರೀತ ಗಾಳೆ ಮಳೆಯಿಂದ ಮೇಲ್ಛಾವಣಿ ಮುರಿದು ಬಿದ್ದ ಪಟ್ಟಣದ ಪ್ರಥಮ ದರ್ಜೆ ಕಾಲೇಜಿಗೆ ಬುಧವಾರ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ, ಪರಿಶೀಲಿಸಿದರು. ನೂತನ ಕಟ್ಟಡವನ್ನು ಶೀಘ್ರದಲ್ಲೇ ಕಾಲೇಜಿಗೆ ಹಸ್ತಾಂತರಿಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದರು.

ನಂತರ ಮಾತನಾಡಿದ ಅವರು, ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಬಹಳ ಹಳೆಯದಾಗಿದ್ದು, ಜೀರ್ಣಾವಸ್ತೆಗೆ ಬಂದು ತಲುಪಿದೆ. ವಿಪರೀತ ಗಾಳಿ ಮಳೆಯಿಂದ ಕಟ್ಟಡಕ್ಕೆ ಸಾಕಷ್ಟು ಹಾನಿಯಾಗಿದ್ದು, ತುರ್ತಾಗಿ ಈ ಕಟ್ಟಡವನ್ನು ದುರಸ್ತಿಗೊಳಿಸಲಿದ್ದೇವೆ. ನೂತನ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದ್ದು, ಸಂಬಂಧಿಸಿದ ಇಲಾಖೆಗೆ ಹಾಗೂ ಗುತ್ತಿಗೆದಾರರಿಗೆ ಒಂದು ತಿಂಗಳೊಳಗಾಗಿ ಕಟ್ಟಡವನ್ನು ಕಾಲೇಜಿಗೆ ಹಸ್ತಾಂತರಿಸುವಂತೆ ಈಗಾಗಲೇ ಸೂಚಿಸಿದ್ದೇನೆ. ಮೊದಲ ಮಹಡಿಯನ್ನು ತಿಂಗಳೊಳಗಾಗಿ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದ ಅವರು, ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಿ, ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಡಯೆಟ್ ಪ್ರಾಚಾರ್ಯ ಈಶ್ವರ ನಾಯ್ಕ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಸೇರಿದಂತೆ ಎಬಿವಿಪಿಯ ಪ್ರಮುಖರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದ್ದರು

Be the first to comment

Leave a Reply

Your email address will not be published.


*