ಪೊಲೀಸ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಆರೋಗ್ಯ ಕಿಟ್ ಹಸ್ತಾಂತರ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಕುಮಟಾ: ಕೊರೊನಾ ವಿರುದ್ಧದ ಹೋರಾಟದಲ್ಲಿ ತಾಲೂಕಿನಾದ್ಯಂತ ಹಗಲಿರುಳು ಶ್ರಮಿಸುತ್ತಿರುವ ಪೆÇಲೀಸ್ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಬುಧವಾರ ಶಾಸಕ ದಿನಕರ ಶೆಟ್ಟಿ ದಾನಿಗಳಿಂದ ಸ್ವೀಕರಿಸಲಾದ ಅಗತ್ಯ ಆರೋಗ್ಯ ಕಿಟ್‍ಗಳನ್ನು ಹಸ್ತಾಂತರಿಸಿದರು.

ನಂತರ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಕಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ತಾ.ಪಂ ಸದಸ್ಯ ಮಹೇಶ ಶೆಟ್ಟಿ, ಪ್ರಮುಖರಾದ ಜಿ.ಜಿ.ಹೆಗಡೆ, ವಿನೋದ ಪ್ರಭು, ವಿಶ್ವನಾಥ ನಾಯ್ಕ, ಪಿಎಸ್‍ಐ ಆನಂದಮೂರ್ತಿ ಸೇರಿದಂತೆ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು

Be the first to comment

Leave a Reply

Your email address will not be published.


*