ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ಅನರ್ಹರು ಹೊಂದಿರುವ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತವಾಗಿ ಆದ್ಯರ್ಪಣೆ ಮಾಡಲು ಜೂನ್ 30 ವರೆಗೆ ಕೊನೆಯ ಅವಕಾಶ ಸರಕಾರ ನೀಡಿದೆ ಎಂದು ಬಾಗಲಕೋಟೆ ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಅಂತ್ಯೋದಯ ಅನ್ನ ಮತ್ತು ಆದ್ಯತಾ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದಲ್ಲಿ ಸ್ವಯಂ ಪ್ರೇರಿತವಾಗಿ ಆದ್ಯರ್ಪಣೆ ಮಾಡಿದಲ್ಲಿ ಅಂತವರ ವಿರುದ್ದ ಯಾವುದೇ ಕಾನೂನು ಕ್ರಮ, ದಂಡ ವಸೂಲಿ ಮಾಡುವದಿಲ್ಲ. ಗೌಪ್ಯ ಮಾಹಿತಿ ನೀಡಿ ಪಡಿತರ ಚೀಟಿ ಪಡೆದುಕೊಂಡ ಫಲಾನುಭವಿಗಳ ಮಾಹಿತಿಯನ್ನು ಸೂಕ್ತ ದಾಖಲೆ ಸಹಿತ ಆಹಾರ ಇಲಾಖೆಯಲ್ಲಿ ನೀಡಬಹುದಾಗಿದೆ. ಇಂತಹ ದೂರುದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುತ್ತದೆ.
ಸರಕಾರದ ಮಾನದಂಡಗಳನ್ನು ಮೀರಿ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವವರ ಕುಟುಂಬಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂತಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತವಾಗಿ ಬಾಗಲಕೋಟೆ ತಾಲೂಕಾ ತಹಶೀಲ್ದಾರ ಕಚೇರಿಯಲ್ಲಿರುವ ಆಹಾರ ಶಾಖೆಗೆ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ ಹಿಂದಿರುಗಿಸಿ ಆದ್ಯತೇತರ ಎಪಿಎಲ್ ಕಾರ್ಡ ಪಡೆಯತಕ್ಕದ್ದು. ತಪ್ಪಿದಲ್ಲಿ ಸರ್ಕಾರದ ಆದೇಶದನ್ವಯ ಭಾರತ ದಂಡ ಸಂಹಿತೆ ಅಡಿಯಲ್ಲಿ ಕ್ರಮಕೈಗೊಳ್ಳಲಾಗುವುದೆಂದು ತಹಶೀಲ್ದಾರರು ತಿಳಿಸಿದ್ದಾರೆ.
Be the first to comment