ಜಿಲ್ಲಾ ಸುದ್ದಿಗಳು
ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು,ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಬಾಗಲಕೋಟೆ: (ಕೆಲೂರ) ಇಲಕಲ್ಲ ತಾಲೂಕಿನ ಕೆಲೂರ ಗ್ರಾಮದ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಶಾಲಾ ಮುಖ್ಯೋಪಾಧ್ಯಾಯರು,ಗ್ರಾಮ ಪಂಚಾಯತಿ ಅಧ್ಯಕ್ಷರು,ಅಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಸೇರಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು.
‘ಮಗುವಿಗೊಂದು ಮರ ಶಾಲೆಗೊಂದು ವನ’ ಇದರ ಉದ್ದೇಶ ಮಕ್ಕಳಲ್ಲಿ ಪರಿಸರ ಮತ್ತು ವಾತಾವರಣದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸ್ವಯಂಪ್ರೇರಿತವಾಗಿ ಗಿಡಗಳನ್ನು ನೆಡಲು ಅವರನ್ನು ಉತ್ತೇಜಿಸುವುದು. ತಮ್ಮ ಶಾಲಾ ಆವರಣದಲ್ಲಿ ಮತ್ತು ತಮ್ಮ ಮನೆಯ ಸುತ್ತಮುತ್ತಲ ಖಾಲಿ ಜಾಗದಲ್ಲಿ ಸಸಿ ನೆಡಲು ವಿದ್ಯಾರ್ಥಿಗಳಿಗೆ ಪ್ರೇರೆಪಿಸಬೇಕು ಎಂದು ಮುಖ್ಯೋಪಾಧ್ಯಾಯರಾದ ಎಸ್.ಬಿ.ದಾಸರ ಹೇಳಿದರು.
ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹಾಲಿಂಗೇಶ ನಾಡಗೌಡರ ಹೇಳಿದರು.
ವಿಶ್ವ ಪರಿಸರ ಸಂರಕ್ಷಣೆ ನಿಮಿತ್ತ ಸಸಿ ನೆಡುವ ಮೂಲಕ ಪರಿಸರ ಪ್ರಜ್ಞೆ ಬೆಳೆಸುವದರ ಜತೆಗೆ ಪ್ರಕೃತಿ ಸಮತೋಲನ ಕಾಯ್ದುಕೊಂಡು ಉತ್ತಮ ಮಳೆ ಬೆಳೆ ಬರಲು ಸಹಾಯವಾಗುತ್ತದೆ.ಇಂದು ಬ.ವಿ.ವಿ ಸಂಸ್ಥೆಯಡಿ ನಡೆಯುತ್ತಿರುವ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಸಸಿನೆಟ್ಟಿರುವುದು ನಮ್ಮ ಭಾಗ್ಯ ಎಂದು ಗ್ರಾಮ ಲೆಕ್ಕಾಧಿಕಾರಿ ಧರ್ಮಣ್ಣ ಯತ್ನಟ್ಟಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಬಿ.ಮುಳ್ಳೂರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ವಜಿರಪ್ಪ ಪೂಜಾರ,ಯುವ ಮುಖಂಡರಾದ ಮುತ್ತಣ್ಣ ನಾಡಗೌಡರ,ಮಾಸಪ್ಪ ಕಬ್ಬರಗಿ,ಬಸವರಾಜ ಮಾದರ,ಶಿಕ್ಷಕರಾದ ಸಿದ್ದರಾಜ ಕೆಂಧೂಳಿ,ಎಸ್.ಬಿ.ಹೆಳವರ,ಎಸ್.ಬಿ.ಯಾವಗಲ್ಲಮಠ,ಬಿ.ಎಸ್.ಕಮತರ,ವಾಯ್.ಎಸ್.ವಾಲಿಕಾರ ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
Be the first to comment