ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಗಾಳಿ ಮಳೆಗೆ ತಾಲೂಕಿನ ಉಪ್ಪಿನಪಟ್ಟಣದ ತಿಮ್ಮಣ ನಾಯಕ ಎನ್ನುವವರ ಮನೆಯ ಮೇಲೆ ತೆಂಗಿನ ಮರ ಮುರಿದು ಬಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಕುಮಟಾ: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ; ಅಪಾರ ಹಾನಿಗಾಳಿ ಮಳೆಗೆ ಮನೆ ಸಮೀಪದಲ್ಲಿರುವ ತೆಂಗಿನ ಮರ ಮುರಿದು ಬಿದ್ದಿದ್ದು, ಮನೆಯ ಒಂದು ಭಾಗದ ಮೇಲ್ಛಾವಣಿ ಸಂಪೂರ್ಣ ನೆಲಸಮವಾಗಿದೆ. ವಿಷಯ ತಿಳಿದ ತಕ್ಷಣ ಗ್ರಾ.ಪಂ ಸದಸ್ಯರೊಂದಿಗೆ ಸ್ಥಳಕ್ಕೆ ತೆರಳಿದ ಅಳಕೋಡ ಗ್ರಾಮ ಪಂಚಾಯತ ಉಪಾಧ್ಯಕ್ಷ ಶ್ರೀಧರ ಪೈ, ಕಂದಾಯ ಇಲಾಖೆಗೆ ಮಾಹಿತಿ ನೀಡಿ, ಸ್ಥಳಕ್ಕೆ ಕರೆಯಿಸಿ, ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ, ಕುಟುಂಬಸ್ಥರಿಗೆ ಶೀಘ್ರದಲ್ಲೇ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.

ಇನ್ನು, ಉಪಾಧ್ಯಕ್ಷ ಶ್ರೀಧರ ಪೈ, ಸದಸ್ಯರಾದ ಮಹೇಶ ದೇಶಭಂಡಾರಿ, ಶ್ರೀಧರ ಗೌಡ ಅವರು ತಾವೇ ಸ್ವತಃ ಸ್ಥಳೀಯರ ಸಹಕಾರದೊಂದಿಗೆ ಮನೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ, ವಾಸಿಸಲು ಅನುಕೂಲ ಕಲ್ಪಿಸಿದರು. ಇವರ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.

Be the first to comment

Leave a Reply

Your email address will not be published.


*