ರಾಜ್ಯ ಸುದ್ದಿ
ಕುಮಟಾ: ತಾಲೂಕಿನ ಮುರ್ಕುಂಡೇಶ್ವರ ಸೌಹಾರ್ದ ಕ್ರೆಡಿಟ್ ಸಹಕಾರಿ ನಿಯಮಿತವು ಪಟ್ಟಣದ ಪೆÇಲೀಸ್ ಠಾಣೆಯ ಮುಂಭಾಗದಲ್ಲಿ ಸುಸಜ್ಜಿತವಾದ ಶೆಡ್ ನಿರ್ಮಿಸಿಕೊಡುವ ಮೂಲಕ ಸಾರ್ವಜನಿಕರಿಗೆ ಹಾಗೂ ಪೆÇಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಅನುಕೂಲ ಕಲ್ಪಿಸಿ, ಮಾನವೀಯತೆ ಮೆರೆದಿದೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ಪೆÇಲೀಸರು ತಮ್ಮ ಜೀವವನ್ನೂ ಲೆಕ್ಕಿಸದೇ ಹಗಲಿರುಳು ಶ್ರಮಿಸುತ್ತಿದ್ದು, ಈ ನಡುವೆಯೇ ತಮ್ಮ ಠಾಣಾ ವ್ಯಾಪ್ತಿಯ ಕಾರ್ಯವನ್ನೂ ಸಹ ಕಚ್ಚಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಕೆಲವು ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಸಹ ಠಾಣೆಗೆ ಆಗಮಿಸುವ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ, ಸಕಾಲಕ್ಕೆ ಸ್ಪಂದಿಸುವ ಮೂಲಕ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೆÇಲೀಸರು ಸಾರ್ವಜನಿಕರ ಕಷ್ಟಕ್ಕೆ ನೆರವಾಗುತ್ತಿದ್ದಾರೆ.
ಪೆÇಲೀಸ್ ಇಲಾಖೆಗೆ ತಮ್ಮಿಂದಾದ ಸಹಾಯ ಮಾಡುವ ನಿಟ್ಟಿನಲ್ಲಿ ಮುರ್ಕುಂಡೇಶ್ವರ ಸೌಹಾರ್ದ ಕ್ರೆಡಿಟ್ ಸಹಕಾರಿ ನಿಯಮಿತವು ಸಾರ್ವಜನಿಕರಿಗೆ ಹಾಗೂ ಪೆÇಲೀಸ್ ಠಾಣೆಯ ಸಿಬ್ಬಂದಿಗಳಿಗೆ ಮಳೆಗಾಲ ಸೇರಿದಂತೆ ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಸಹ ಸಾಮಾಜಿಕ ಅಂತರದೊಂದಿಗೆ ಕುಳಿತುಕೊಳ್ಳಲುಸುಸಜ್ಜಿತವಾದ ಶೇಡ್ ನಿರ್ಮಿಸಿ, ಅನುಕೂಲ ಕಲ್ಪಿಸಿದೆ.ಮುರ್ಕುಂಡೇಶ್ವರ ಸೌಹಾರ್ದ ಕ್ರೆಡಿಟ್ ಸಹಕಾರಿ ನಿಯಮಿತದ ಅಧ್ಯಕ್ಷ ರಾಘವೇಂದ್ರ ನಾಯಕ ಹಾಗೂ ಎಲ್ಲ ನಿರ್ದೇಶಕರ ಮತ್ತು ಆಡಳಿತ ಮಂಡಳಿಯ ನಡೆಗೆ ಪೆÇಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Be the first to comment