ಜಾಜಿಗುಡ್ಡೆಯಲ್ಲಿ ಭೂ ಕುಸಿತ; ಜನರ ಸ್ಥಳಾಂತರ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಗೆ ಶಿರಸಿ ತಾಲೂಕಿನ ಜಾಜಿ ಗುಡ್ಡದಲ್ಲಿ ಭೂ ಕುಸಿತ ಉಂಟಾಗಿದ್ದು ಈ ಗ್ರಾಮದ ಏಳು ಮನೆಗಳ ಜನರನ್ನು ಸ್ಥಳಾಂತರಿಸಲು ಶಿರಸಿ ತಹಶಿಲ್ದಾರ್ ಎಂ.ಆರ್ .ಕುಲಕರ್ಣಿ ಆದೇಶ ನೀಡಿದ್ದಾರೆ.

ಇನ್ನು ಶಿರಸಿಯ ಹುಣಸೆ ಕೊಪ್ಪದಲ್ಲೂ ಭೂ ಕುಸಿತದಿಂದ ನಿನ್ನೆದಿನ ಮಂಜುನಾಥ್ ಗಣಪ ಗೌಡ ಎಂಬುವವರು ಮೃತಪಟ್ಟಿದ್ದರು. ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಮುಂದುವರೆದಿದ್ದು ಈ ತಿಂಗಳ 18 ರ ವರೆಗೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಜಿಲ್ಲೆಯಲ್ಲಿ ಅಬ್ಬರದ ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರೆಯುವ ಸೂಚನೆ ನೀಡಿದ್ದಾರೆ.

Be the first to comment

Leave a Reply

Your email address will not be published.


*