ರಾಜ್ಯ ಸುದ್ದಿ
ಶಿರಸಿ: ತಾಲೂಕಿನಾದ್ಯಂತ ಮಹಾಮಾರಿ ಕೊರೋನಾ ಸೋಂಕಿನ ವಿರುದ್ಧ ರಾತ್ರಿ ಹಗಲೆನ್ನದೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗಳಿಗೆ ಉಪೇಂದ್ರ ಪೈ ಸೇವಾ ಟ್ರಸ್ಟಿನ ಅಧ್ಯಕ್ಷ ಉಪೇಂದ್ರ ಪೈ ಅವರು ತಮ್ಮ ಮನೆಯ ಆವರಣದಲ್ಲಿ ಮಾಸ್ಕ್, ಸ್ಯಾನಿಟೈಜರ, ಮೊಟ್ಟೆ ಹಾಗೂ ಹಣ್ಣು ಹಂಪಲ ವಿತರಿಸಿದರು.
ನಂತರ ಮಾತನಾಡಿದ ಅವರು ಕೊರೊನಾ ರೋಗದಿಂದ ದೇಶವೇ ತಲ್ಲಣಗೊಂಡಿದೆ. ಇದರ ವಿರುದ್ದ ಹಲವಾರು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹೋರಾಟ ನಡೆಸುತ್ತಿದ್ದಾರೆ. ಅದರಲ್ಲಿ ಗೃಹರಕ್ಷಕ ದಳದ ಸೇವೆ ಅನನ್ಯವಾದದ್ದು, ಅದರಲ್ಲೂ ಮಹಿಳಾ ಸಿಬ್ಬಂದಿ ಧೈರ್ಯದಿಂದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ ಅವರ ಸೇವೆ ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಆಟೋ ಚಾಲಕ ಹಾಗೂ ಮಾಲಕರ ಸಂಘದ ಪದಾಧಿಕಾರಿ ಈಶ್ವರ್ ಆಚಾರಿ ಹಾಗೂ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.
Be the first to comment