ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಸವಾರರು ಪ್ರಾಣಾಪಾಯದಿಂದ ಪಾರು

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಪಲ್ಟಿಯಾಗಿ ಹೆದ್ದಾರಿ ಪಕ್ಕಕ್ಕೆ ಬಿದ್ದು ಸಂಪೂರ್ಣವಾಗಿ ಜಖಂಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ತಾಲೂಕಿನ ತಂಡ್ರಕುಳಿ ಕ್ರಾಸ್ ಬಳಿ ಸಂಭವಿಸಿದೆ.

ಕುಮಟಾ ಮಾರ್ಗವಾಗಿ ಕಾರವಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಬಗ್ಗೆ ಮಾಹಿತಿ ಪಡೆದ ಕುಮಟಾ ಪೆÇಲೀಸರು ಸ್ಥಳಕ್ಕೆ ತೆರಳಿ, ಅಪಘಾತಕ್ಕೊಳಗಾದ ಕಾರನ್ನು ಮೇಲಕ್ಕೆತ್ತಿ, ಪೆÇಲೀಸ್ ಠಾಣೆಗೆ ಸಾಗಿಸಿದ್ದಾರೆ.

ಈ ಭಾಗದಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿರುವುದಕ್ಕೆ ಅವೈಜ್ಞಾನಿಕ ಚತುಷ್ಪಥ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆದ್ದಾರಿಯ ಒಂದು ಕಡೆ ಮಣ್ಣು ತುಂಬಿ ರಾಶಿ ಹಾಕಲಾಗಿದ್ದು, ಇನ್ನೊಂದು ಕಡೆ ಮಣ್ಣು ತುಂಬದೇ ಹಾಗೇ ಬಿಟ್ಟಿದ್ದಾರೆ. ಈ ಭಾಗದ ಚತುಷ್ಪಥ ಹೆದ್ದಾರಿ ತಿರುವಿನಲ್ಲೆ ಸಿಂಗಲ್ ರಸ್ತೆ ಇರುವುದರಿಂದ ವೇಗವಾಗಿ ಬಂದ ವಾಹನಗಳು ಒಮ್ಮೆಲೆ ನಿಯಂತ್ರಣ ತಪ್ಪುವ ಸಾಧ್ಯತೆ ಅಧಿಕವಾಗಿದೆ. ತಾಲೂಕಾಡಳಿತ ಶೀಘ್ರದಲ್ಲೇ ಎಚ್ಚೆತ್ತುಕೊಂಡು ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅನಾಹುತಗಳಿಗೆ ಸಂಬಂಧಪಟ್ಟ ಇಲಾಖೆ ಜೊತೆಗೆ ತಾಲೂಕು ಆಡಳಿತವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

Be the first to comment

Leave a Reply

Your email address will not be published.


*