ರಾಜ್ಯ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ಶುರು ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15 ರಿಂದ ಆನ್ ಲೈನ್ ತರಗತಿಗಳು ಪ್ರಾರಂಭ ಮಾಡಲು ನಿರ್ಧರಿಸಲಾಗಿದ್ದು, ಭೌತಿಕ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಥಮ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮೊದಲು ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುವುದು. ಕೊರೊನಾ ಸ್ಥಿತಿಗತಿ ನೋಡಿಕೊಂಡು ಭೌತಿಕ ತರಗತಿಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುವುದು. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಜುಲೈ ಕೊನೆಯ ವಾರದಿಂದಲೇ ಭೌತಿಕ ತರಗತಿಗಳನ್ನು ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
Be the first to comment