ರಾಜ್ಯ ಸುದ್ದಿ
ಕುಮಟಾ: ಲಾಕ್‍ಡೌನ್‍ನಿಂದ ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಸೋಮವಾರದಿಂದ ಆರಂಭವಾಗಲಿದ್ದು, ಭಾನುವಾರ ಹೊಸ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿದ್ದರಿಂದ ಮಾರ್ಚ್ ತಿಂಗಳಿನಿಂದ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸದ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರಿಂದ ಲಾಕ್‍ಡೌನ್ ತೆರುವುಗೊಳಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ಹಿನ್ನಲೆಯಲ್ಲಿ ಬಸ್‍ಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಜೇಶನ್ ಮಾಡುವ ಜೊತೆಗೆ ಹೊಸ ಬಸ್ ನಿಲ್ದಾಣದಲ್ಲೂ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.
ಕಾರವಾರ, ಭಟ್ಕಳ ಮತ್ತು ಶಿರಸಿ ಮಾರ್ಗಗಳಲ್ಲಿ ಬಸ್ ಸಂಚರಿಸಲಿದ್ದು, ಪ್ರಯಾಣಿಕರು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಬಸ್‍ನಲ್ಲಿ ಸಂಚರಿಸಬಹುದೆಂದು ಕುಮಟಾ ಘಟಕದ ವ್ಯವಸ್ಥಾಪಕಿ ಸೌಮ್ಯ ನಾಯಕ ತಿಳಿಸಿದ್ದಾರೆ.ಕೆಎಸ್‍ಆರ್‍ಟಿಸಿ ಕುಮಟಾ ಘಟಕದ ವ್ಯವಸ್ಥಾಪಕಿ ಸೌಮ್ಯ ನಾಯಕ ಮತ್ತು ಎಟಿಎಸ್ ಶಿವಾನಂದ ನಾಯ್ಕ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಬಸ್ ನಿಲ್ದಾಣಾಧಿಕಾರಿ ಎನ್.ಆರ್.ನಾಯ್ಕ, ಉದಯ ಹಾದಿಮನೆ, ಎಮ್.ಡಿ.ನಾಯ್ಕ, ಮನೋಜ ಶೆಟ್ಟಿ, ವಿ.ಎಸ್. ಭಟ್ಟ ಹಾಗೂ ಘಟಕದ ಚಾಲಕರು ಮತ್ತು ನಿರ್ವಾಹಕರು ಪಾಲ್ಗೊಂಡಿದ್ದರು.
Be the first to comment