ರಾಜ್ಯ ಸುದ್ದಿ
ಕುಮಟಾ: ತಾಲೂಕಿನ ಮಣಕಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅಂಬುಲೆನ್ಸ್ ಪಲ್ಟಿಯಾದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಹುಬ್ಬಳ್ಳಿಯಿಂದ ಉಡುಪಿಗೆ ವಾಪಸ್ ಹೋಗುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ಗುದ್ದಿ ಪಲ್ಟಿ ಹೊಡೆದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕುಮಟಾ ಪೋಲೀಸರು ಸ್ಥಳಕ್ಕೆ ಧಾವಿಸಿದ್ದು, ರಸ್ತೆ ಸಂಚಾರಕ್ಕೆ ಅನುಕೂಲಮಾಡಿಕೊಟ್ಟಿದ್ದಾರೆ.
Be the first to comment