ಜನಸಾಮಾನ್ಯರ ಮೇಲೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ಬೆಲೆ ಏರಿಕೆ ಖಂಡನೀಯ 

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿ 

CHETAN KENDULI

ತೈಲ ಉತ್ಪನ್ನಗಳ ಬೆಲೆ ಗಗನಕ್ಕೇರಿಸಿರುವುದನ್ನು ಹಿಂಪಡೆಯಬೇಕು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ.ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ರೂಢವಾಗಿರುವ ಬಿಜೆಪಿ ಸರಕಾರಗಳು ಜನ ಸಾಮಾನ್ಯರ, ರೈತರ, ಕೂಲಿ ಕಾರ್ಮಿಕರ, ದೀನ ದಲಿತರ ಬದುಕಿನ ಮೇಲೆ ಪರಿಣಾಮ ಬೀರವಂತೆ ತೈಲಬೆಲೆಯನ್ನು ಪ್ರತಿ ಲೀಟರ್‌ಗೆ ೧೦೦ರೂ. ಗಡಿ ದಾಟಿಸಿರುವುದು ಕೂಡಲೇ ಹಿಂಪಡೆಯಬೇಕು ಮತ್ತು ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ಒದಗಿಸಿಕೊಡಬೇಕು ಎಂದು ದೇವನಹಳ್ಳಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಸರಕಾರಕ್ಕೆ ಒತ್ತಾಯಿಸಿದರು.

ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೆಡಿಎಸ್‌ನ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ವ್ಯಾಪಕವಾಗಿ ವಿಧಿಸಿರುವ ಸಂಪೂರ್ಣ ಲಾಕ್‌ಡೌನ್‌ನಿಂದ ಬಾಧಿತರಾಗಿ, ಸಂಕಷ್ಟದಲ್ಲಿರುವ ರಾಜ್ಯದ ಜನತೆ ಬಳಲುತ್ತಿರುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೈಲ ಬೆಲೆಯನ್ನು ಏರಿಸಿರುವುದು ಬಹಳ ಖಂಡನೀಯವಾದದ್ದು,ಕೊರೊನಾ ಅಲೆ ಪ್ರಾರಂಭವಾದಾಗಿನಿಂದಲೂ ಒಂದಲ್ಲಾ ಒಂದು ರೀತಿಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇದರ ಮಧ್ಯೆ ಬೆಲೆ ಏರಿಕೆ ಬಿಸಿಯಿಂದ ಮತ್ತಷ್ಟು ಜನರ ಬದುಕು ಕಷ್ಟಕರವಾಗಿದೆ. ಕೋವಿಡ್ ಸೋಂಕಿನಿಂದ ಕುಟುಂಬದ ಮುಖ್ಯಸ್ಥ ಸಾವಿಗೀಡಾಗಿದ್ದರಿಂದ ಇಡೀ ಕುಟುಂಬ ಬೀದಿಗೆ ಬರುವ ಪರಿಸ್ಥಿತಿ ಇದೆ. ಕೆಲವರ ಕುಟುಂಬದಲ್ಲಿ ಎಳೆಯ ಮಕ್ಕಳು ಸಹ ಇದ್ದಾರೆ. ಇಂಥಹ ಸಮಯದಲ್ಲಿ ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಿಗೆ ಮಾಡಿದ್ದಾರೆ. ಏಪ್ರೀಲ್ ತಿಂಗಳಿನಿಂದಲೇ ಪ್ರತಿ ಯೂನಿಟ್ ವಿದ್ಯುತ್‌ಗೆ ೩೦ಪೈಸೆ ಹೆಚ್ಚಳ ಮಾಡಿರುವುದು ಬಡ ಜನರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ರೈತರು ಬೆಳೆದ ಫಸಲು ಕೊಂಡುಕೊಳ್ಳವರು ಇಲ್ಲದೆ, ರೈತರು ಬೀದಿಗೆ ಬರುವಂತೆ ಆಗಿದೆ. ಜನರ ಸಂಕಷ್ಟಗಳಿಗೆ ರಾಜ್ಯ ಬಿಜೆಪಿ ಸರಕಾರ ಸ್ಪಂಧಿಸುತ್ತಿಲ್ಲ. ಕೂಡಲೇ ಇಂತಹ ಬೆಲೆ ಏರಿಕೆಗಳನ್ನು ವಾಪಾಸ್ ಪಡೆದು, ಜನರ ಸಂಕಷ್ಟಗಳಿಗೆ ಸ್ಪಂಧಿಸುವಂತೆ ಆಗಬೇಕು ಎಂದು ಆಗ್ರಹಿಸಿದರು.

 

ನೆಲಮಂಗಲ ಶಾಸಕ ಶ್ರೀನಿವಾಸ್‌ಮೂರ್ತಿ ಮಾತನಾಡಿ, ಕೊರೊನಾ ಸೋಂಕಿನಿಂದ ರಾಜ್ಯದ ಸಾವಿರಾರು ಸೋಂಕಿತರು ಸಾವನ್ನಪ್ಪಿದ್ದುಕ, ಮೃತರ ಕುಟುಂಬದವರು ಸಂಕಷ್ಟದ ಛಾಯೆಯಲ್ಲಿ ಬದುಕು ನಡೆಸುವ ಪರಿಸ್ಥಿತಿ ಇದೆ. ಹಲವಾರು ಕುಟುಂಬದಲ್ಲಿನ ದುಡಿಮೆ ಮಾಡುವ ಮುಖ್ಯಸ್ಥರನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಬದುಕಲು ಆಗದೆ, ಅತ್ತ ಸಾಯಲು ಆಗದೆ ನರಳಾಟದಿಂದ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ನೆರವಿಗೆ ಧಾವಿಸಬೇಕು. ಕೊರೊನಾ ನಿಯಂತ್ರಣದ ವಿಚಾರದಲ್ಲಿ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿನ ಜನತೆ ಒಂದಲ್ಲ ಒಂದು ವಿಧದಲ್ಲಿ ಬಾಧಿತರಾಗಿದ್ದಾರೆ. ಅದ್ದರಿಂದ ಕೊರೊನಾದಿಂದ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ ೫ಲಕ್ಷ ರೂ. ಪರಿಹಾರವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜೆಡಿಎಸ್ ಕಾರ್ಯಾಧ್ಯಕ್ಷ ಬಿ.ಮುನೇಗೌಡ, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಪದಾಧಿಕಾರಿಗಳು ಇದ್ದರು. ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರಾದ ಎಲ್.ಎನ್.ನಾರಾಯಣಸ್ವಾಮಿ, ಶ್ರೀನಿವಾಸ್‌ಮೂರ್ತಿ ಹಾಗೂ ಜೆಡಿಎಸ್ ಮುಖಂಡರು ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಸರಕಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

Be the first to comment

Leave a Reply

Your email address will not be published.


*