ದೇವನಹಳ್ಳಿಯಲ್ಲಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸಿ ಎನ್ನುವ ಸಂದೇಶ

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿ

CHETAN KENDULI

ದೇವನಹಳ್ಳಿ ಪಟ್ಟಣದ ಗಾಂಧಿ ಚೌಕದ ಹತ್ತಿರವಿರುವ ಸರ್ಕಾರಿ ಬಾಲಕೀಯರ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ತಾಲ್ಲೂಕು ಹಿಂದೂ ಜಾಗರಣಾ ವೇದಿಕೆ ಮತ್ತು ಸೇವಾ ಭಾರತಿ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಇವರುಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

ಇಂದು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಿದ್ದು ರಕ್ತದಾನಿಗಳಿಂದ 150 ಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹ ಮಾಡುವ ಗುರಿ ಹೊಂದಿದ್ದೇವೆ, ಸಂಜೆ 4 ಗಂಟೆಯ ವರೆಗೆ ರಕ್ತ ಸಂಗ್ರಹ ಕಾರ್ಯ ನಡೆಯುತ್ತಿದೆ ಇದಕ್ಕೆಲ್ಲಾ ನಮ್ಮ ವೇದಿಕೆಯ ಸಹಪಾಠಿಗಳು ಹೆಚ್ಚಿನ ಸಹಕಾರ ನೀಡಿದ್ದಾರೆ ಹಾಗೂ ರಕ್ತದ ಅನಿವಾರ‍್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ರಕ್ತವನ್ನು ಉತ್ಪತ್ತಿ ಮಾಡಲು ಸಾಧ್ಯವಿಲ್ಲ. ಆರೋಗ್ಯವಂತ ವ್ಯಕ್ತಿ ಮತ್ತೊಬ್ಬರಿಗೆ ರಕ್ತದಾನ ಮಾಡಿದರೆ ತುರ್ತು ಸಂದರ್ಭದಲ್ಲಿ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಹಿಂದೂ ಜಾಗರಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಅರವಿಂದ್ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಭರತ್ ಜೀ, ಹಿಂದೂ ಜಾಗರಣಾ ವೇದಿಕೆಯ ಮುನೀಂದ್ರ, ಮಣಿ, ಸುಬ್ರಹ್ಮಣ್ಯ, ಅಮರ್, ಮೋನಿಶ್, ರಾಷ್ಟ್ರೋತ್ಥಾನ ರಕ್ತ ನಿಧಿಯ ಈಶ್ವರ್ ಇನ್ನು ಹಲವು ಸ್ವಯಂ ಸೇವಕರು ಈ ಕಾರ್ಯಕ್ಕೆ ಸಹಕರಿಸಿದ್ದಾರೆ.

Be the first to comment

Leave a Reply

Your email address will not be published.


*