ರಾಜ್ಯ ಸುದ್ದಿ
ಅಂಕೋಲಾ: ತಾಲೂಕಿನ ಡೋಂಗ್ರಿ ಸೇತುವೆಯನ್ನು ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡುವುದಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಶಾಸಕಿ ರೂಪಾಲಿ ಮಾಹಿತಿ ನೀಡಿದ್ದಾರೆ.
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ವಿಶೇಷ ಮುತುವರ್ಜಿಯಿಂದ ಸೇತುವೆ ನಿರ್ಮಾಣಕ್ಕೆ ಅನುಮತಿ ದೊರಕಿದೆ. ತಾಲೂಕಿನಲ್ಲಿ ರಾಮನಗುಳಿ ಮತ್ತು ಡೋಂಗ್ರಿ ಹಾಗೂ ಇತರೆ ಗ್ರಾಮಗಳ ಜನರು ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಹೋಗಬೇಕಾದಲ್ಲಿ ದೋಣಿಯನ್ನು ಆಶ್ರಯಿಸಬೇಕಾಗಿತ್ತು. ಈ ಭಾಗದ ಈ ಸೇತುವೆ ನಿರ್ಮಾಣ ಮಾಡಿವುದರಿಂದಾಗಿ ಸುಲಭವಾಗಿ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಸಂಪರ್ಕ ಸಾಧನವಾಗುತ್ತದೆ. ಈ ಮೂಲಕವಾಗಿ ರಾಮನಗುಳಿ ಹಾಗೂ ಡೋಂಗ್ರಿ ಪಂಚಾಯತ ವ್ಯಾಪ್ತಿ ಸಾರ್ವಜನಿಕರ ದಶಕಗಳ ಕನಸು ನನಸಾಗಿದೆ.
ಸಚಿವ ಶಿವರಾಮ ಹೆಬ್ಬಾರ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರವಾಗಿ ನೂತನ ಸುಸಜ್ಜಿತ ಸೇತುವೆ ನಿರ್ಮಾಣ ಮಾಡುವುದಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರಿಗೆ ರಾಮನಗುಳಿ ಹಾಗೂ ಡೋಂಗ್ರಿ ಪಂಚಾಯತ ವ್ಯಾಪ್ತಿಯ ಜನತೆಯ ಪರವಾಗಿ ಶಾಸಕಿ ರೂಪಾಲಿ ಅಭಿನಂದನೆ ಸಲ್ಲಿಸಿದ್ದಾರೆ.
Be the first to comment