ಸರ್ಕಾರಿ ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಿ; ಜೆಡಿಎಸ್ ಕುಮಟಾ ಘಟಕದಿಂದ ಆಗ್ರಹ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ

 

CHETAN KENDULI

 

ಕುಮಟಾ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ, ಜೆಡಿಎಸ್ ಕುಮಟಾ ಘಟಕದ ವತಿಯಿಂದ ಪ್ರಾಂಶುಪಾಲೆ ಗೀತಾ ವಾಲಿಕಾರ ಅವರಿಗೆ ಮನವಿ ಸಲ್ಲಿಸಲಾಯಿತು.ನಂತರ ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಮಾತನಾಡಿ, ಕಾಲೇಜಿನ ಕಟ್ಟಡ ಸಂಪೂರ್ಣ ಶಿಥಿಲಾವಸ್ತೆಗೆ ತಲುಪಿದೆ. ಇದರಿಂದ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆ ಇಳಿಮುಖವಾಗುತ್ತಿದ್ದು, ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಏರುತ್ತಿದೆ. ಇದಕ್ಕೆ ಕಾಲೇಜಿನಲ್ಲಿರುವ ಅವ್ಯವಸ್ಥೆಯೇ ಕಾರಣ ಎಂದು ಆರೋಪಿಸಿದ ಅವರು ಈ ಬಗ್ಗೆ ಆಡಳಿತ ಕಮಿಟಿಯು ಸರ್ಕಾರದ ಗಮನಕ್ಕೆ ತಂದು, ಶೀಘ್ರದಲ್ಲೇ ಸೂಕ್ತ ಕ್ರಮವಹಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಇನ್ನು ನೂತನ ಕಾಲೇಜು ಕಟ್ಟಡ ಕಾಮಗಾರಿ 2015 ರಲ್ಲೇ ಪ್ರಾರಂಭಗೊಂಡಿದ್ದು, 6 ವರ್ಷಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಸ್ಥಳೀಯ ಶಾಸಕರೂ ಸಹ ಈ ಬಗ್ಗೆ ಮೌನ ತಾಳಿದ್ದು, ಮಾತಿನಲ್ಲಿ ಮಾತ್ರ ಕ್ಷೇತ್ರದ ಅಭಿವೃದ್ಧಿ ತೋರಿಸುತ್ತಿದ್ದಾರೆ. ಇವರ ನಿರ್ಲಕ್ಷ್ಯ ಧೋರಣೆಯಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಶೀಘ್ರದಲ್ಲೇ ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ, ಕಾಲೇಜಿಗೆ ಹಸ್ತಾಂತರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.ಪ್ರಾಶುಪಾಲೆ ಗೀತಾ ವಾಲೀಕಾರ ಮಾತನಾಡಿ, ಕಳೆದ ವರ್ಷದ ಲಾಕ್‍ಡೌನ್‍ನಿಂದ ಕಟ್ಟಡ ಕಾಮಗಾರಿ ನಿಧಾನ ಗತಿಯಲ್ಲಿ ಸಾಗಿದ್ದು, ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು. ಮನವಿ ಸಲ್ಲಿಕೆಯಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಸಿ.ಜಿ.ಹೆಗಡೆ, ಭಾಸ್ಕರ ಪಟಗಾರ, ಜಿ.ಕೆ.ಪಟಗಾರ ಸೇರಿದಂತೆ ಇನ್ನಿತರರು ಇದ್ದರು

Be the first to comment

Leave a Reply

Your email address will not be published.


*