ರಾಜ್ಯ ಸುದ್ದಿಗಳು
ಮುದ್ದೇಬಿಹಾಳ:
ಕಾರ ಹುಣ್ಣುಮೆ ನಿಮಿತ್ಯ ಗ್ರಾಮದಲ್ಲಿ ಕರಿ ಹರಿಯುವ ಮುನ್ನ ಮಾಜಿ ತಾಲೂಕು ಪಂಚಾಯತಿ ಉಪಾಧ್ಯಕ್ಷ ಗಾಳಿಯಲ್ಲಿ ಫೈರಿಂಗ್ ಮಾಡಿರುವ ವಿಡಿಯೋ ಇದೀಗ್ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಾ ಪಂಚಾಯತ ಮಾಜಿ ಉಪಾಧ್ಯಕ್ಷ ಮಂಜುನಾಥ ಪಾಟೀಲ್ ನಾಡಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸುವ ಘಟನೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ನಡೆದಿದೆ.
ಇನ್ನು ಮಂಜುನಾಥಗೌಡ ಪಾಟೀಲ್ ಅನುಮತಿ ಹೊಂದಿರುವ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಆದ್ರೇ, ಜನನಿ ಬಿಡ ಸ್ಥಳದಲ್ಲೇ ಗುಂಡು ಹಾರಿಸಿದ್ದಾರೆ. ಇದರಿಂದ ಗಾಳಿಯ ಗುಂಡಿಗ್ ತೀವ್ರ ಚರ್ಚೆಗೆ ಕಾರಣವಾಗಿದೆ. ಅದಕ್ಕಾಗಿ ಜಿಲ್ಲಾ ಪೊಲೀಸ ಇಲಾಖೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕಿದೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.
Be the first to comment