ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ್ ನಿರಾಣಿಯವರು ಜೂನ್ 26 ಬೆಳಗ್ಗೆ 10ಕ್ಕೆ ಬೀಳಗಿ ಮತಕ್ಷೇತ್ರದ ಕೋರ್ತಿ, 11ಕ್ಕೆ ನಾಗರಾಳ ಗ್ರಾಮಕ್ಕೆ ಭೇಟಿ ನೀಡಿ ಕೊವಿಡ್ ನಿಯಂತ್ರಣ ಕ್ರಮಗಳ ಕುರಿತು ಸಭೆ ನಡೆಸಲಿದ್ದಾರೆ. ಮದ್ಯಾಹ್ನ 12ಕ್ಕೆ ಬೀಳಗಿ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜ ಆವರಣದಲ್ಲಿ ಸಸಿ ನೆಟ್ಟು, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಎಂ.ಎನ್.ನಿರಾಣಿ ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಕಾಮಗಾರಿ ಪರಿಶೀಲಿಸಲಿದ್ದಾರೆ. ಮದ್ಯಾಹ್ನ 3ಕ್ಕೆ ಜಾನಮಟ್ಟಿ, ಅರಕೇರಿ, ಚಿಕ್ಕಾಲಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರತು ಸಭೆ ನಡೆಸುವರು. ನಂತರ ಚಿಕ್ಕಾಲಗುಂಡಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಸಂಜೆ 6ಕ್ಕೆ ಮುಧೋಳಕ್ಕೆ ಪ್ರಯಾಣ ಬೆಳೆಸಿ ವಾಸ್ತವ್ಯ ಹೂಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Be the first to comment