ಜನರೇ, ಮಾದಕ ವಸ್ತುಗಳ ಸೇವನೆಯಿಂದ ಹೊರಬನ್ನಿ : ಅ.ಕ.ಜ.ಜಾ.ವೇದಿಕೆ ಜಿಲ್ಲಾಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಅಂಗವಾಗಿ ಕರಪತ್ರ ಬಿಡುಗಡೆ

ವರದಿ ಹೈದರ್‌ಸಾಬ್, ಕುಂದಾಣ

ರಾಜ್ಯ ಸುದ್ದಿ 

CHETAN KENDULI

ದೇವನಹಳ್ಳಿ: ನಗರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಬಿರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಅಂಗವಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾದಕ ವಸ್ತುಗಳ ಸೇವೆನೆಯಿಂದಾಗುವ ದೃಷ್ಪರಿಣಾಮಗಳ ಬಗ್ಗೆ ಅರಿವು ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಅಕಜಜಾವೇದಿಕೆಯ ಜಿಲ್ಲಾಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ,ಮಾದಕ ಪದಾರ್ಥಗಳ ಸೇವೆಯ ಚಟವು ವ್ಯಕ್ತಿಯ ದೈಹಿಕ, ಮಾನಸಿಕ, ಕೌಟುಂಬಿಕ, ಸಾಮಾಜಿಕ, ಆಧ್ಯಾತ್ಮಿಕ ಹಾಗೂ ಆರ್ಥಿಕ ಅಭಿವೃದ್ಧಿಯ ಮೇಲೆ ದುಷ್ಪರಿಣಾಮವನ್ನು ಬೀರುವುದಲ್ಲದೆ, ವ್ಯಕ್ತಿಯ ಘನತೆ ಗೌರವಗಳನ್ನು ಕಳೆದುಕೊಳ್ಳುತ್ತದೆ. ಇದರಿಂದ ಹೊರ ಬರಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜನ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನರು ಮಾದಕ ವ್ಯಸನದಿಂದ ಹೊರಬರಬೇಕು. ಆದ್ಯಾತ್ಮಕ ಜೀವನಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಆಗಬೇಕು. ಮದ್ಯವರ್ಜನ ಶಿಬಿರದಿಂದ ಸಾಕಷ್ಟು ವ್ಯಸನಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಬದುಕಲು ಸಹಕಾರಿಯಾಗಿದೆ ಎಂದು ಹೇಳಿದರು.

ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ನಾಗೇಶ್ ಮಾತನಾಡಿ,ಹಲವಾರು ಕುಟುಂಬಗಳು ಮಾದಕ ವಸ್ತುಗಳಿಗೆ ದಾಸರಾಗಿ ಬೀದಿಗೆ ಬಂದಿವೆ. ಮದ್ಯವರ್ಜನ ಶಿಬಿರಗಳಿಂದ ಎಷ್ಟೋ ಕುಟುಂಬಗಳು ಸಂತೋಷದಿಂದ ಸಂಸಾರ ನಡೆಸುತ್ತಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಕರಪತ್ರ ಬಿಡುಗಡೆಗೊಳಿಸಲಾಯಿತು.ಈ ವೇಳೆಯಲ್ಲಿ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಫಲಾನುಭವಿಗಳಿಗೆ ಪೂಜ್ಯ ವೀರೇಂದ್ರ ಹೆಗಡೆಯವರ ಅನುಪಸ್ಥಿತಿಯಲ್ಲಿ ಆರ್ಥಿಕ ದನಸಹಾಯದ ಚೆಕ್‌ಗಳನ್ನು ನೀಡಲಾಯಿತು. ಇನ್ನೂ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯ ನರಸಿಂಹರಾಜು, ಒಕ್ಕೂಟದ ಸದಸ್ಯೆ ಶಾಂತಮ್ಮ, ಮಹಿಳಾ ಪ್ರತಿನಿಧಿಗಳು ಇದ್ದರು.

 

Be the first to comment

Leave a Reply

Your email address will not be published.


*