ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದ ಅಡಾಖ್ ಸಮಿತಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಕಾರಹಳ್ಳಿ ಆರ್.ಮುನೇಗೌಡ ಆಯ್ಕೆ

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿ 

CHETAN KENDULI

ದೇವನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರದೇಶ ಜನತಾದಳ-ಜಾತ್ಯಾತೀತ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಡಾಖ್ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಡಾಖ್ ಸಮಿತಿಯ ಆಯ್ಕೆ ಪ್ರಕ್ರಿಯೆಯ ವೀಕ್ಷಕ ಬೆಳ್ಳಿ ಲೋಕೇಶ್ ಮಾತನಾಡಿ, ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಇತರೆ ಚುನಾವಣೆಗಳಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಬೂತ್ ಮಟ್ಟದಲ್ಲಿ ಸಂಘಟಿಸಲು ಅನುಕೂಲವಾಗುವಂತೆ, ಅಡಾಖ್ ಸಮಿತಿಯನ್ನು ರಚಿಸಲಾಗುತ್ತಿದೆ. ದೇವನಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ೨೬೫ ಬೂತ್‌ಗಳಿದ್ದು, ೨೬೫ ಬೂತ್ ಕಮಿಟಿ ಅಧ್ಯಕ್ಷರನ್ನು ಮಾಡಲಾಗುತ್ತಿದೆ. ತಲಾ ಒಂದು ಬೂತ್‌ಗೆ ೨೦ ಜನರ ನೇಮಕ ಮಾಡಿ ಪಕ್ಷ ಸಂಘಟಿಸಲು ಒತ್ತು ನೀಡಲಾಗುತ್ತಿದೆ ಎಂದ್ರು.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಅಡಾಖ್ ಸಮಿತಿಯ ಪದಾಧಿಕಾರಿಗಳನ್ನು ದೇವನಹಳ್ಳಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ, ನೆಲಮಂಗಲ ಶಾಸಕ ಡಾ.ಶ್ರೀನಿವಾಸ್‌ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹಾಗೂ ಪಕ್ಷದ ಮುಖಂಡರು ಅಭಿನಂದಿಸಿದರು.ಈ ವೇಳೆಯಲ್ಲಿ ಜೆಡಿಎಸ್‌ನ ಮುಖಂಡರು, ಮಹಿಳಾ ಕಾರ್ಯಕರ್ತರು ಇದ್ದರು.

Be the first to comment

Leave a Reply

Your email address will not be published.


*