ಬಾಗಲಕೋಟೆ: ಅಲ್ಪಸಂಖ್ಯಾತರ ಇಲಾಖೆಯ ವ್ಯಾಪ್ತಿಗೆ ಬರುವ ನವನಗರದ ವಿವಿಧ ಸೆಕ್ಟರಗಳಲ್ಲಿಯ ಕಾಮಗಾರಿಗಳ ಸ್ಥಳಕ್ಕೆ ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನವನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಿಳಾ ಉದ್ಯೋಗಿಗಳ ವಸತಿ ನಿಲಯ ಕಟ್ಟಡ, ಸೆಕ್ಟರ ನಂ.38 ಮತ್ತು 13 ರಲ್ಲಿ ನಿರ್ಮಾಣಗೊಳ್ಳುತ್ತಿರುವ ಮೌಲಾನಾ ಆಜಾದ್ ಇಂಗ್ಲೀಷ ಮಿಡಿಯಂ ಸ್ಕೂಲ್ ಕಟ್ಟಡ ಇತರೆ ಸಣ್ಣ ಪುಟ್ಟ ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಲು ತಿಳಿಸಿದರು. ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಎಂ.ಎನ್.ಮೇಲಿನಮನಿ, ನಿರ್ಮಿತಿ ಕೇಂದ್ರದ ಜ್ಯೂನಿಯರ್ ಇಂಜಿನೀಯರ್ ಶರಣು ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment