ರಾಜ್ಯ ಸುದ್ದಿ
ಬೆಂಗಳೂರು: ಕೊರೊನಾ ಎರಡನೇ ಅಲೆ ನಡುವೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಮುಹೂರ್ತ ನಿಗದಿಯಾಗಿದ್ದು, ಜುಲೈ.19 ಮತ್ತು 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ಕೋರ್ ಸಬ್ಜೆಕ್ಟ್ ಪರೀಕ್ಷೆಗಳು ನಡೆಯುತ್ತವೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30ರಿಂದ 1.30ರವರೆಗೆ ಪರೀಕ್ಷೆ ನಡೆಯುತ್ತದೆ. ಜೂನ್ 30 ರಂದು ಪ್ರವೇಶ ಪತ್ರ ನೀಡುತ್ತೇವೆ ಎಂದು ತಿಳಿಸಿದರು.
ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಪರೀಕ್ಷೆ ನಡೆಸುವ ಸಂಬಂಧ ಆರೋಗ್ಯ ಇಲಾಖೆ ಎಸ್ ಒಪಿ ನೀಡಿದೆ. ಮಾರ್ಗಸೂಚಿ ಸಂಬಂಧ ಡಿಸಿಗಳು ಸಿಇಓ ಖಜಾನೆ ಅದಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಈ ಬಾರಿ 2 ದಿನ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಗಣಿತ, ವಿಜ್ಞಾನ, ಸಮಾಜವಿಜ್ಞಾನ ಪರೀಕ್ಷೆಗಳು ಒಂದು ದಿನ ನಡೆಯುತ್ತೆ. ಮೂರು ವಿಷಯಗಳಿಗೆ ಒಂದು ಪರೀಕ್ಷೆ ನಡೆಯುತ್ತದೆ. ಭಾಷೆಗಳ ಪರೀಕ್ಷೆ ಮತ್ತೊಂದು ದಿನ ನಡೆಯುತ್ತದೆ. ಈ ಬಾರಿ ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತದೆ ಎಂದು ತಿಳಿಸಿದರು.
ಕೊರೋನಾ ಸೋಂಕಿತ ವಿದ್ಯಾರ್ಥಿಯೂ ಪರೀಕ್ಷೆ ಬರೆಯಬಹುದು: ಕೊಠಡಿ ಮೇಲ್ವಿಚಾರಕರು ಕಡ್ಡಾಯವಾಗಿ ಒಂದು ಡೋಸ್ ಕೋವಿಡ್ ಲಸಿಕೆ ಪಡೆಯಬೇಕು. ಕೊರೋನಾ ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆಯಬಹುದು. ಪರೀಕ್ಷೆ ಬರೆಯುವ ಹಂಬಲವಿದ್ದರೆ ಬರೆಯಬಹುದು. ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ.
Be the first to comment