ರಾಜ್ಯ ಸುದ್ದಿ
ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜು.30 ರೊಳಗೆ ಪ್ರಕಟ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಅದರಂತೆ ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು.
ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಫಲಿತಾಂಶ ತೃಪ್ತಿಯಾಗದೇ ಇದ್ದಲ್ಲಿ, ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.ಕೋವಿಡ್ ಕಾರಣದಿಂದ ಈ ಬಾರಿ ರಾಜ್ಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದರು.
Be the first to comment