ರಾಜ್ಯ ಸುದ್ದಿಗಳು
ಪುತ್ತೂರು:
ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕಟೀಲ್(56) ಅವರು ಸೋಮವಾರ ಸಂಜೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ಕೃಷಿಕರಾಗಿದ್ದ ನವೀನ್ ಕುಮಾರ್ ಕಟೀಲ್ ಚಿಕಿತ್ಸೆ ಫಲಕಾರಿಯಾಗದೇ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರಿ ನಂದಿನಿ ಇದ್ದಾರೆ.
ಸಂತಾಪ:
ಮೃತರರ ಕುಟುಂಬಕ್ಕೆ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ರಾಜ್ಯ ಆಹಾರ ನಿಗಮ ಅಧ್ಯಕ್ಷ ಎ.ಎಸ್.ಪಾಟೀಲ (ನಡಹಳ್ಳಿ), ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಬಿಜೆಪಿ ತಾಲೂಕಾಧ್ಯಕ್ಷ ಪರಶುರಾಮ ಪವಾರ, ಮಾಜಿ ಜಿಪಂ ಅಧ್ಯಕ್ಷ ಪ್ರಭುಗೌಡ ದೇಸಾಯಿ ಸೇರಿದಂತೆ ಬಿಜೆಪಿ ಸರ್ವ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.
Be the first to comment