ರಾಜ್ಯ ಸುದ್ದಿ
ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ತಮ್ಮದೇ ರೀತಿಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂಧಿಸುವ ಹಾಗೂ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಕೆಲ ಮುಖಂಡರ ನಡೆ ಖಂಡಿಸುವಂತಹದ್ದು ಎಂದು ಛಲವಾದಿ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕಾಳಪ್ಪನವರ ವೆಂಕಟೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಾಜ ಸೇವೆ ಮಾಡಿಕೊಂಡು ಜನರ ಪ್ರೀತಿ ಗಳಿಸಿ, ಶಾಸಕರಾಗಿರುವ ನಾರಾಯಣಸ್ವಾಮಿ ಅವರು ಶಾಸಕರಾದ ನಂತರ ಹಲವಾರು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ರಸ್ತೆ, ಕೊಳವೆ ಬಾವಿ, ಕುಡಿಯುವ ನೀರು, ಮೂಲಭೂತ ಸೌಕರ್ಯಗಳು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸ್ಪಂಧಿಸಿ, ನ್ಯಾಯ ಒದಗಿಸುವ ಕೆಲವನ್ನು ಮಾಡುತ್ತಿದ್ದಾರೆ. ಕೊರೊನಾ ಮೊದಲನೇ ಅಲೆ ಕ್ಷೇತ್ರಕ್ಕೆ ಆವರಿಸಿದಾಗ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆಸಿ ತಾಲೂಕಿನ ಪ್ರತಿ ಜನರಿಗೆ ಆಹಾರದ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ.
ಕೊರೊನಾ ಎರಡನೇ ಅಲೆ ಕ್ಷೇತ್ರದಲ್ಲಿ ಆವರಿಸಿದಾಗ ಕ್ಷೇತ್ರದ ಜನರೊಂದಿಗೆ ಬರೆತು ಕೆಲಸ ಮಾಡುವ ಶಾಸಕರಿಗೆ ಸೋಂಕು ದೃಢಪಟ್ಟಿದ್ದರಿಂದ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡು ಕ್ಷೇತ್ರಕ್ಕೆ ಬಂದರು. ಚಿಕಿತ್ಸೆ ಸಂದರ್ಭದಲ್ಲಿ ಅವರು ಕ್ಷೇತ್ರದಲ್ಲಿ ಇಲ್ಲದಿದ್ದರೂ ಸಹ ದೂರವಾಣಿ ಕರೆಗಳಿಗೆ ಸ್ಪಂಧಿಸಿ ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್, ಇತರೆ ವ್ಯವಸ್ಥೆಯನ್ನು ಅಲ್ಲಿಂದಲೇ ಮಾಡುತ್ತಿದ್ದರು. ಅವರ ಹುಟ್ಟುಹಬ್ಬದಂದು ಶಾಸಕರ ಅಭಿಮಾನಿಗಳು ಮಾಡಿದ್ದಾರೆಯೇ ವಿನಃ ಅವರು ಮಾಡಿದ್ದಲ್ಲ. ಹಾಗಂದ ಮಾತ್ರಕ್ಕೆ ಪ್ರಾಮಾಣಿಕವಾಗಿ ಕ್ಷೇತ್ರದ ಜನತೆಗೆ ಸೇವೆ ಸಲ್ಲಿಸುತ್ತಿರುವ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲ ಮುಖಂಡರು ಅವರ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡುವುದು ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ ಎಂದು ಪ್ರಶ್ನಿಸಿದರು.
Be the first to comment