ರಾಜ್ಯ ಸುದ್ದಿ
ದೇಶ ಹಾಗೂ ರಾಜ್ಯದಲ್ಲಿ ಯುವ ಸಮೂಹಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಡಾ. ಸಂದೀಪ್ ತಿಳಿಸಿದ್ದಾರೆ.ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ಇತರೆ ಚುನಾವಣೆಗಳಲ್ಲಿ ಯುವ ನಾಯಕರು ಹಾಗೂ ಕ್ರಿಯಾಶೀಲ ಯುವ ಪಡೆಯನ್ನು ಗುರುತಿಸಿ ಚುನಾವಣೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆರಿಸಿ ಜನರ ಸೇವೆ ಮಾಡಲು ಬಿಜೆಪಿ ಪಕ್ಷ ಸದಾ ಸಿದ್ಧವಾಗಿದೆ ಎಂದರು.
ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿರುವ ವೃಕ್ಷಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಲುವಾಗಿ ತುಮಕೂರಿಗೆ ಭೇಟಿ ನೀಡಿದ ರಾಜ್ಯಾಧ್ಯಕ್ಷರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ನಂತರ ಶಿವಕುಮಾರ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದರು.
ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಜನತಾ ಪಕ್ಷದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ರವರ ಬಲಿದಾನ ಹಾಗೂ ಅವರ ಜನ್ಮದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ವೃಕ್ಷರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದರ ಮೂಲಕ ರಾಜ್ಯದ ಉದ್ದಗಲಕ್ಕೂ ಪರಿಸರ ಸಂರಕ್ಷಣೆ ಹಾಗೂ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ರಾಜ್ಯದ್ಯಂತ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರು. ಸೇವಾ ಸಂಘಟನೆ ಮೂಲಕ ರಾಜ್ಯದ ಉದ್ದಗಲಕ್ಕೂ ಕೋವಿಡ್ 19 ರ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರ ಸಂಕಷ್ಟಕ್ಕೆ ನೆರವಾಗಿದೆ .
ಇನ್ನೂ ಬಿಜೆಪಿ ಯುವಮೋರ್ಚಾ ಪರಿಸರವನ್ನು ಸಂರಕ್ಷಿಸುವ ಸಲುವಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದರ ಮೂಲಕ ರಾಜ್ಯಾದ್ಯಂತ ಯುವಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲಾಗುವುದು ಎಂದರು.ತುಮಕೂರಿನ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಪದಾಧಿಕಾರಿಗಳಿಗೆ ಇದೆ ಸಂದರ್ಭದಲ್ಲಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ .ಬಿ ಜ್ಯೋತಿಗಣೇಶ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ, ರಾಜ್ಯ ಕಾರ್ಯದರ್ಶಿ ಅರವಿಂದ ರೆಡ್ಡಿ, ರಾಜ್ಯಕಾರ್ಯಕಾರಣಿ ಸದಸ್ಯರಾದ ರುದ್ರೇಶ್, ಪ್ರಶಾಂತ್ ರೆಡ್ಡಿ, ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರವೀಶ್ ಅರಕೆರೆ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶಸ್, ನಗರ ಅಧ್ಯಕ್ಷ ನಾಗೇಂದ್ರ, ಶಿವದೇವ ಸೇರಿದಂತೆ ಹಲವರು ಹಾಜರಿದ್ದರು.
Be the first to comment