ರಾಜ್ಯ ಸುದ್ದಿ
ಶಿರಸಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜು.5 ರಿಂದ 7 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ ಪ್ರವಾಸ ಕೈಗೊಳ್ಳಲಿದ್ದು, ಜು.7 ರಂದು ಶಿರಸಿಗೆ ಆಗಮಿಸಲಿದ್ದಾರೆ.
ಬುಧವಾರ ಬೆಳಿಗ್ಗೆ ಶಿರಸಿಗೆ ಡಿ.ಕೆ ಶಿವಕುಮಾರ ಆಗಮಿಸಲಿದ್ದು, 10.30 ಕ್ಕೆ ತಾಯಿ ಶ್ರೀ ಮಾರಿಕಾಂಬೆ ದರ್ಶನ ಪಡೆಯುವರು. ತೈಲ ಬೆಲೆ ಏರಿಕೆ ವಿರೋಧಿಸಿ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 3 ಗಂಟೆಗೆ ಕೋವಿಡ್ ಸಹಾಯ ಹಸ್ತದ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕರಾರಿಗಳ ಸಭೆ ನಡೆಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment