ಜಿಲ್ಲಾ ಸುದ್ದಿಗಳು
ಮುದ್ದೇಬಿಹಾಳ:
ಪೆಟ್ರೀಲ ಹಾಗೂ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲೂಕಿನ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕೇಂದ್ರ ಸರಕಾರದ ವಿರುದ್ಧ ಘೋಷಣೆಯನ್ನು ಕೂಗಿ ಸೈಕಲ್ ಜಾಥಾ ಮಾಡುವ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಮೋಧಿಯವರಿಗೆ ತಹಸೀಲ್ದಾರ ಅವರ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಸದ್ದಾಂ ಕುಂಟೋಜಿ, ಮೊದಲೇ ಕೊರೊನಾ ಮಹಾಮಾರಿಯಿಂದ ಬಡಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿಯೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಬಡಜನರಿಗೆ ಎಷ್ಟರಮಟ್ಟಿಗೆ ಕಾಳಜಿ ತೋರಿಸುತ್ತಿದೆ ಎನ್ನುವುದು ತಿಳಿದು ಬರುತ್ತಿದೆ. ಜನರು ದುಡಿಮೆ ಇಲ್ಲದ ಸಮಯದಲ್ಲಿ ದಿನನಿತ್ಯ ವಸ್ತಗಳ ಬೆಲೆ ಏರಿಕೆ ಮಾಡಿದರೆ ಬಡಜನರ ಜೇಬಿಗೆ ಕತ್ತರಿ ಹಾಕಿದಂತಾಗುತ್ತದೆ. ಜನಸಾಮಾನ್ಯರ ಹೊರೆ ತಗ್ಗಿಸಿ ಕೂಡಲೇ ಇಂಧನ ಬೆಲೆ ಇಳಿಸಬೇಕು ಎಂದು ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ರಾಣಿಚನ್ನಮ್ಮ ವೃತ್ತದ ಮೂಲಕ ತಹಸೀಲ್ದಾರ ಕಛೇರಿಯವರೆಗೆ ಸೈಕಲ್ ಜಾಥಾ ಮಾಡುವ ಮೂಲಕ ಸಂಘದ ಪದಾಧಿಕಾರಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ ಅವರ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಿಯಾಜ್ ಢವಳಗಿ, ಜಾವಿದ್ ಮೋಮಿನ್, ಹುಸೇನ್ ಮುಲ್ಲಾ, ಹರೀಶ್ ಬೇವೂರ್, ಬಾಬಾ ಪಾಟೀಲ್, ಮಾನಸು ನಾಯಕ್, ಸಮೀರ್ ದ್ರಾಕ್ಷಿ, ಅಬೂಬಕರ್ ಹಡಗಲಿ, ರಾಜ ಮುದ್ನಾಳ, ದವಲ್ ಗೊಳಸಂಗಿ, ಬಂಧು ಚಿನ್ನರಿ, ಬಾಬಾ ಕಿತ್ತೂರು, ಸೋಮನಾಥ್ ಆಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Be the first to comment