ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಆರಂಭ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದಲ್ಲಿರುವ 2ನೇ ಮಹಡಿಯ ಕೊಠಡಿ ಸಂ.104 ರಲ್ಲಿ ಆರಂಭಿಸಲಾದ ಸಚಿವರ ಕಾರ್ಯಾಲಯವನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೋಮವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಜಿ.ಪಂ ನೂತನ ಸಭಾಭವನದಲ್ಲಿ ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆಯ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

Be the first to comment

Leave a Reply

Your email address will not be published.


*