ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಭಿಯಾನದ ಪ್ರಚಾರ ವಾಹನಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಸಿರು ನಿಶಾಣೆ ತೋರುವ ಮೂಲಕ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಡಾ.ಚೇತನಾ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರೈತರ ಬೆಳೆಗ ವಿಮಾ ಯೋಜನೆ ಅಭಿಯಾನದಡಿ ಹಮ್ಮಿಕೊಂಡ ಪ್ರಚಾರ ವಾಹನವು ಜಿಲ್ಲೆಯಾದ್ಯಂತ ಎಲ್ಲ ಹಳ್ಳಿಗಳಿಗೆ ಸಂಚರಿಸಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅನುಸೂಚಿತ ಬೆಳೆಗಳಿಗೆ ವಿಮೆಗೆ ಒಳಪಡಿಸುವ ಬಗ್ಗೆ ಮಾಹಿತಿ ನೀಡಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಕೋರಿದರು.
Be the first to comment