ರಾಜ್ಯ ಸುದ್ದಿ
ದೇವನಹಳ್ಳಿ: ಪೆಟ್ರೋಲ್ ಡೀಸೆಲ್ ದರ ದಿನೆದಿನೆ ಹೆಚ್ಚುತ್ತಿದ್ದು ಹಾಗೂ ಅಗತ್ಯ ವಸ್ತುಗಳ ಬೆಲೆಯೂ ಸಾಮಾನ್ಯ ಜನರ ಕೈಗೆಟುಕದೇ ಕೈಮೀರಿದ ಹಿನ್ನೆಲೆ ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಜನವಿರೋಧಿ ನೀತಿ ಖಂಡಿಸಿ ನಾಳೆ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ಮಾಡುವುದರ ಬಗ್ಗೆ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾಹಿತಿ ನೀಡಿದರು.
ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ಮತ್ತು ವಿಜಯಪುರ ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪೂರ್ವ ಬಾವಿ ಸಭೆಯಲ್ಲಿ ಮಾತನಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ನಾಳೆ ರಾಜ್ಯಾದ್ಯಂತ ಸೈಕಲ್ ಜಾಥಾ ಹಮ್ಮಿಕೊಂಡಿದ್ದು ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಕ್ಷೀಣಿಸುವವರೆಗೂ ಇಂತಹ ಹಲವು ರೀತಿಯ ಪ್ರತಿಭಟನೆ, ಜಾಥಾ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡುತ್ತಿರುತ್ತೇವೆ
ನಾಳೆ ಬೈಪಾಸ್ ರಸ್ತೆಯಲ್ಲಿ ಸಾವಿರಕ್ಕೂ ಹೆಚ್ಚು ಸೈಕಲ್ ಗಳೊಂದಿಗೆ ಜಾಥಾ ಪ್ರಾರಂಬಿಸಿ ತಾಲ್ಲೂಕು ಕಚೇರಿವರೆಗೆ ಬಂದು ತಹಸೀಲ್ದಾರರಿಗೆ ಮನವಿ ನೀಡುವುದಾಗಿ ತಿಳಿಸಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಮುನಿನರಸಿಂಹಯ್ಯ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್, ಕೆ.ಸಿ.ಮಂಜುನಾಥ್, ಕೆಪಿಸಿಸಿ ಸದಸ್ಯ ಚಿನ್ನಪ್ಪ,ಪ್ರಚಾರ ಸಮಿತಿ ಅಧ್ಯಕ್ಷ ಚೇತನ್ ಗೌಡ,ವಿಜಯಪುರ ಬ್ಲಾಕ್ ಅಧ್ಯಕ್ಷ ರಾಮಚಂದ್ರಪ್ಪ, ಇನ್ನು ಹಲವು ಮುಖಂಡರು ಇದ್ದರು.
Be the first to comment