ಓಂಬುಡ್ಸ್‍ಮನ್ ಕಚೇರಿ ಕಾರ್ಯನಿರ್ವಹಣೆ ಪುನರ್ ಆರಂಭ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್-19 ಭೀತಿ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರವು ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಿ, ಸಾರ್ವಜನಿಕ ಸಾರಿಗೆ ಸೇರಿದಂತೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಸುರಕ್ಷತಾ ಕ್ರಮವಾಗಿ ಜಿಲ್ಲಾ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಓಂಬುಡ್ಸಮನ್ ಕಚೇರಿಗಳ ಕಾರ್ಯನಿರ್ವಹಣೆಯನ್ನು ಮುಂದಿನ ಆದೇಶದ ವರೆಗೆ ಸ್ಥಗಿತಗೊಳಿಸಲಾಗಿತ್ತು.

ರಾಜ್ಯದಲ್ಲಿ ಹೇರಲಾದ ನಿರ್ಬಂಧಗಳ ಸಡಿಲಿಕೆಯಿಂದ ವಾಹನ ಸಂಚಾರ ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಣೆಗೆ ಅವಕಾಶ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಓಂಬುಡ್ಸಮನ್ ಕಚೇರಿಗಳು ಸರಕಾರವು ಹೊರಡಿಸಿರುವ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡು ಕಾರ್ಯನಿರ್ವಹಣೆಯನ್ನು ಪುನರ್ ಪ್ರಾರಂಭಿಸಲು ತಿಳಿಸಿರುವುದಾಗಿ ಜಿ.ಪಂ ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*