ಜಿಲ್ಲಾ ಸುದ್ದಿಗಳು
ಕಾರವಾರ:
ಸಿಎಂ ಬಿಎಸ್ ಯಡಿಯೂರಪ್ಪ ಜುಲೈ 16ರಂದು ಕಾರವಾರ- ಅಂಕೋಲಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಕೇಶವ ಜಿಲ್ಲಾಧಿಕಾರಿಗೆ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.
ಈ ಹಿಂದೆ ಮಾರ್ಚ್ ನಲ್ಲಿ ಅಂಕೋಲಾ-ಕಾರವಾರ ಶಾಸಕಿ ರೂಪಾಲಿ ನಾಯ್ಕ ಸಿಎಂ ಅವರಿಗೆ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದರು. ಆದರೆ ಕೊರೋನಾ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಈಗ ಸಿಎಂ ಪ್ರವಾಸ ನಿಗದಿಯಾಗಿದ್ದು ಸಿಎಂ ಬಿಎಸ್ವೈ ಕಾರವಾರಕ್ಕೆ ಆಗಮಿಸಲಿದ್ದಾರೆ.
Be the first to comment