ಜಿಲ್ಲಾ ಸುದ್ದಿಗಳು
ಮಂಗಳೂರು:
ಲಂಚ ಸ್ವೀಕಾರ ಪ್ರಕರಣದಲ್ಲಿ ಮಂಗಳೂರು ವಿಶ್ವ ವಿಧ್ಯಾನಿಲಯದ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಡಾ. ಅನಿತಾ ರವಿಶಂಕರ್ ಗೆ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು ವರ್ಷ ಶಿಕ್ಷೆ ಘೋಷಿಸಿದೆ.
ಘಟನೆ ಹಿನ್ನೆಲೆ:
2012 ಡಿಸೆಂಬರ್‌ನಲ್ಲಿ ಪಿ.ಎಚ್.ಡಿ ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಅವರಿಂದ ಪ್ರಬಂಧ ಅಂಗೀಕಾರವಾಗಲು 16,800ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರೇಮ ಡಿ’ಸೋಜ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಇದರ ಮುಂಗಡ ಹಣ 5000 ಸಾವಿರ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದರು.
ಡಾ. ಅನಿತಾ ರವಿಶಂಕರ್ ಈ ಹಿಂದೆ 10,000ರೂ, ನಂತರ 4,000ರೂ ಮತ್ತೆ 16,800ರೂ ಕ್ಕೆ ಪ್ರೇಮ ಡಿ’ಸೋಜ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆಗೆ ಒಳ ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 7 ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ. ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳುಗಳ ಸಾದಾ ಸಜೆ ಎಂದು ಆದೇಶಿಸಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.
Be the first to comment