ಜಿಲ್ಲಾ ಸುದ್ದಿಗಳು
ಶಿರಸಿ:
ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿದಿದ್ದೇನೆ. ಕಾಂಗ್ರೆಸ್ ಗೆ ನಾನು ನಿನ್ನೆ ಮೊನ್ನೆ ಬಂದವನಲ್ಲ. ನಾನೂ ಸಹ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಹೇಳಿದರು.
ಶನಿವಾರ ಅವರು ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಯಾವುದೇ ಕ್ಷೇತ್ರದ ಸೇವಾಕರ್ತನಿಗೆ ಬೆಳೆಯಬೇಕು ಎಂಬ ಕನಸು ಸಹಜ. ಕಳೆದ 2004 ರಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ, ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಚುನಾವಣೆಯಲ್ಲಿ ದುಡಿದಿದ್ದೇನೆ. ಈ ಕಾರಣದಿಂದ ಪಕ್ಷದಿಂದ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು, ನಾಯಕರಾದ ಆರ್.ವಿ.ದೇಶಪಾಂಡೆ, ಜಿಲ್ಲಾಧ್ಯಕ್ಷರಾದ ಭೀಮಣ್ಣ ನಾಯ್ಕ ಅವರು ನೀಡುವ ತೀರ್ಮಾನಕ್ಕೆ ಬದ್ದನಿದ್ದೇನೆ ಎಂದು ಹೇಳಿದರು. ಸುದ್ಧಿಗೋಷ್ಟಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಬಸವರಾಜ ದೊಡ್ಮನಿ, ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ ಸೇರಿದಂತೆ ಇನ್ನಿತರರು ಇದ್ದರು.
ಈ ಮುಂಚೆಯೇ ಶಿರಸಿ ಕ್ಷೇತ್ರದ ಮೇಲೆ ಯುವ ಧುರೀಣ ನಿವೇದಿತ್ ಆಳ್ವಾ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ ಆಕಾಂಕ್ಷಿಗಳೆಂದು ಬಹಿರಂಗವಾಗಿ ಪ್ರಕಟಿಸಿದ್ದಾರೆ. ಪಕ್ಷದ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Be the first to comment