ಜಿಲ್ಲಾ ಸುದ್ದಿಗಳು
ದೇವನಹಳ್ಳಿ
ಕಟ್ಟಡ ಕಾರ್ಮಿಕರು ಹೆಚ್ಚು ಶ್ರಮವಹಿಸುತ್ತಾರೆ. ಅವರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾರಹಳ್ಳಿ ಗ್ರಾಪಂ ಸದಸ್ಯ ಎನ್.ಚಂದ್ರಶೇಖರ್ ತಿಳಿಸಿದರು.ದೇವನಹಳ್ಳಿ ತಾಲೂಕಿನ ಮೀಸಗಾನಹಳ್ಳಿ ಗ್ರಾಮದಲ್ಲಿ ಗ್ರಾಮದ ಕಟ್ಟಡ ಕಾರ್ಮಿಕರಿಗೆ ಸರಕಾರದ ದಿನಸಿಕಿಟ್ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿರುವ ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಮುಂಬರಲು ಸರಕಾರ ವಿಶೇಷ ಯೋಜನೆಗಳನ್ನು ತಂದಿದೆ. ಕೋವಿಡ್ ಸಂಕಷ್ಟದಲ್ಲಿ ಕಟ್ಟಡ ಕಾರ್ಮಿಕರ ಆರ್ಥಿಕವಾಗಿ ಕಷ್ಟದಲ್ಲಿದ್ದರು. ಅವರನ್ನು ಗುರ್ತಿಸಿರುವುದು ಶ್ಲಾಘನೀಯ. ಇದೇ ರೀತಿ ಮುಂದಿನ ದಿನಗಳಲ್ಲಿ ಆರ್ಥಿಕ ನೆರವನ್ನು ಸರಕಾರ ನೀಡಬೇಕು. ಯಾವುದೇ ಅನುದಾನವಾದರು ಮೊದಲು ದೇಶದ ಪ್ರಗತಿಗೆ ಶ್ರಮಿಸುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಕಟ್ಟಡ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡಲು ಕೋವಿಡ್ ಕಾಲದಲ್ಲಿ ಹೆಚ್ಚು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಗ್ರಾಮದ ಮುಖಂಡರು ಸಹ ಕಟ್ಟಡ ಕಾರ್ಮಿಕರನ್ನು ಪ್ರೋತ್ಸಾಹಿಸಲು ಮುಂದಾಗಿರುವುದು ಸಂತಸ ತಂದಿದೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಪಂ ಮಾಜಿ ಸದಸ್ಯರಾದ ಶಿವಶಂಕರ್, ಡಿ.ನಾರಾಯಣಸ್ವಾಮಿ, ಹಾಲಿ ಸದಸ್ಯೆ ಮಮತಾ ವೆಂಕಟೇಶ್, ಮುಖಂಡರಾದ ಪಿ.ಮಂಜುನಾಥ್, ಕೃಷ್ಣಮೂರ್ತಿ, ಎಚ್.ಡಿ.ತಿಮ್ಮಯ್ಯ, ಗ್ರಾಮಸ್ಥರು, ಕಟ್ಟಡ ಕಾರ್ಮಿಕರು ಇದ್ದರು.
Be the first to comment