ಜಿಲ್ಲಾ ಸುದ್ದಿಗಳು
ಹರಿಹರ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ,ಡೀಸೆಲ್, ಅಡುಗೆ ಅನಿಲ ,ವಿದ್ಯುತ್ ಹಾಗೂ ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ದಿನಾಂಕ 20/7/2021 ರಂದು ಬೆಳಿಗ್ಗೆ 10 ಗಂಟೆಗೆ ಹರಿಹರದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಹಾಗೂ ಜಿಲ್ಲಾಧ್ಯಕ್ಷ ಬಿ ಚಿದಾನಂದಪ್ಪ ಇವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹರಿಹರದ ಮಾಜಿ ಶಾಸಕರು ನಮ್ಮ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡರು.
ಅಂದು ಬೆಳಿಗ್ಗೆ ಹತ್ತು ಗಂಟೆಗೆ ಹರಿಹರದ ಶಿವಮೊಗ್ಗ ರಸ್ತೆಯಲ್ಲಿ ಇರುವ ನೀರಾವರಿ ಇಲಾಖೆಯ ಗಣಪತಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ನಗರದ ಹರಪನಹಳ್ಳಿ ಸರ್ಕಲ್ ಗೆ ಆಗಮಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು .ಅದೇ ದಿನ ಮಧ್ಯಾಹ್ನ 2ಗಂಟೆಗೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಕುರಿತು ಪೂರ್ವಭಾವಿ ಸಭೆಯನ್ನು ನಗರದ ಶ್ರೀ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದಿನ ಈ ಎಲ್ಲಾ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ,ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿಕೊಳ್ಳಲಾಗಿದೆ .ಅಂದಿನ ಪ್ರತಿಭಟನಾ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಪೂರ್ವಬಾವಿ ಸಭೆ ಕಾರ್ಯಕ್ರಮದಲ್ಲಿ ಎಲ್ಲರೂ ಮಾಸ್ಕ್ ಧರಿಸಿ,ಸಾಮಾಜಿಕ ಅಂತರವನ್ನು ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
Be the first to comment