ಜಿಲ್ಲಾ ಸುದ್ದಿಗಳು
ಶಿರಸಿ
ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆ ಗೋಡೆ ಕುಸಿದ್ದು ಶ್ರೀಮತಿ ಯಶೋದಾ ಬಂಗಾರಿ ಗೌಡ ಮೃತಪಟ್ಟಿದ್ದು, ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಅನ್ಯ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಂತ್ಯ ಸಂಸ್ಕಾರಕ್ಕೆ ವೈಯಕ್ತಿಕ ಧನಸಹಾಯವನ್ನು ನೀಡಿದರು ಹಾಗೂ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರಧನವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ತಹಶೀಲ್ದಾರ್ ಕುಲಕರ್ಣಿ, ಡಿ.ವೈ,ಎಸ್.ಪಿ ರವಿ ನಾಯ್ಕ, ಸಿ.ಪಿ.ಆಯ್. ರಾಮಚಂದ್ರ ನಾಯಕ ಬನವಾಸಿ ಪಿ.ಎಸ್.ಆಯ್ ಹಾಗೂ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸ್ಥಳೀಯ ಮುಖಂಡರು ಹಾಗೂ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment