ಮಗಳ ಸಾವಿನ ಸುದ್ದಿ ಕೇಳಿ ತಂದೆ ಸಾವು; ಭಟ್ಕಳದಲ್ಲಿ ನಡೆಯಿತು ಹೃದಯ ವಿದ್ರಾವಕ ಘಟನೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿಗಳು

ಭಟ್ಕಳ

CHETAN KENDULI

ತಾಲೂಕಿನ ಮಾರುಕೇರಿಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟರೆ, ಆಕೆಯ ತಂದೆ ಮನೆಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಾರುಕೇರಿ ಹೆಚ್ಚಿಲು ನಿವಾಸಿ ಕಾವ್ಯ ರಾಮ ಗೊಂಡ(15) ಹಾಗೂ ಆಕೆಯ ತಂದೆ ರಾಮ ಸುಕ್ರ ಗೊಂಡ (46)ಮೃತರು. ತಾಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಕಾವ್ಯ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು. ಈಕೆ ಇದಕ್ಕಿಂದ್ದಂತೆ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಿಂದ ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಈ ಸುದ್ದಿ ಕೇಳಿ ಇತ್ತ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಕೂಡ ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಒಂದೇ ಕುಟುಂಬದ ಎರಡು ಸದಸ್ಯರು ಒಂದೇ ದಿನ ಮೃತರಾಗಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

Be the first to comment

Leave a Reply

Your email address will not be published.


*