ಪ್ರವಾಹ ಸಂತ್ರಸ್ತರಿಗೆ ಕೋಟ್ಯಂತರ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಿಕೊಡಲು ಸುಧಾಮೂರ್ತಿ ನಿರ್ಧಾರ .

ಉತ್ತರ ಕರ್ನಾಟಕ ಪ್ರವಾಹ ಜನರು ತತ್ತರ


        ರಾಜ್ಯ ಸುದ್ದಿಗಳು


ಬೆಂಗಳೂರು: (ಅ:14) ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರು ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ, ಸಂಕಷ್ಟಕ್ಕೆ ಈಡಾದ ಜನರಿಗೆ ಅಗತ್ಯ ವಸ್ತುಗಳನ್ನು ತಮ್ಮ ಸಂಸ್ಥೆಯ ಮುಖೇನ ಪೂರೈಸುತ್ತಿರುವ ವಿಷಯ ಎಲ್ಲರಿಗೂ ತಿಳಿದಿದೆ. ಅವರು ಅದರ ಜೊತೆಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

ಈಗ ಅದರ ಜೊತೆಗೆ ಪ್ರವಾಸ ಸಂತ್ರಸ್ತರಿಗೆ ಸುಮಾರು 10 ಕೋಟಿಗಳ ವೆಚ್ಚದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಮಾದ್ಯಮಗಳ ಜೊತೆ ಮಾತನಾಡಿರುವ ಪ್ರವಾಹ ಪರಿಸ್ಥಿತಿ ಹತೋಟಿಗೆ ಬಂದ ನಂತರ ಮನೆಗಳ ನಿರ್ಮಾಣ ಮಾಡುವ ಚಿಂತನೆ ನಡೆಸಲಾಗಿದೆ‌ ಎಂದಿದ್ದಾರೆ.

­ಹೆಚ್ಚು ಪ್ರವಾಹದ ಹೊಡೆತಕ್ಕೆ ಒಳಗಾಗಿರುವ ಕಡೆಗಳಲ್ಲಿ, ಕಾನೂನಿನ ದೃಷ್ಟಿಯಿಂದ ಸೂಕ್ತವಾದಂತಹ ಸ್ಥಳವನ್ನು ಹುಡುಕಿ , ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಸಿಕೊಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈಗ ಸರಬರಾಜು ಮಾಡುತ್ತಿರುವ ಅಗತ್ಯ ವಸ್ತುಗಳ ಹೊರತಾಗಿ ಸುಮಾರು 10 ಕೋಟಿ ರೂ.ಗಳ ವೆಚ್ಚದಲ್ಲಿ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮನೆಗಳ ನಿರ್ಮಾಣಕ್ಕಾಗಿ ಸುಮಾರು 10 ಕೋಟಿ ರೂ. ಮೀಸಲಿರಿಸಿದ್ದೇವೆ ಎಂದಿದ್ದಾರೆ.

ಹಿಂದೆ ಕೊಡಗಿನಲ್ಲಿ ಪ್ರವಾಹ ಉಂಟಾದಾಗ ಸುಮಾರು 2,500 ಮನೆಗಳನ್ನು ನಿರ್ಮಿಸಿದ್ದೆವು. ಈಗ ಹಾನಿಯ ಪ್ರಮಾಣವನ್ನು ನೋಡಿಕೊಂಡು ಅಗತ್ಯವಿದ್ದಷ್ಟು ಮನೆಗಳನ್ನು ನಿರ್ಮಿಸಲಾಗುವುದು. ಎಂದ ಅವರು ಮನೆ ನಿರ್ಮಾಣ ಕಾರ್ಯಕ್ಕಾಗಿ ನಮ್ಮ ಗುತ್ತಿಗೆದಾರ ರಮೇಶ್ ರೆಡ್ಡಿ ಅವರ ತಂಡ ಸಿದ್ಧವಾಗಿದೆ. ಅವರ ನೇತೃತ್ವದಲ್ಲಿಯೇ ಮನೆ ನಿರ್ಮಾಣ ಕಾರ್ಯವು ನಡೆಯಲಿದೆ ಎಂದು ಅವರು ಮಾದ್ಯಮಗಳಿಗೆ ತಿಳಿಸಿದ್ದಾರೆ.‌

 

Be the first to comment

Leave a Reply

Your email address will not be published.


*