ಆಗಸ್ಟ 14 ರಂದು ಮೆಗಾ ಲೋಕ್ ಅದಾಲತ್

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯಾದ್ಯಂತ ಎಲ್ಲ ಅಧೀನ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಆಗಸ್ಟ 14 ರಂದು ಮೇಗಾ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಕಾನೂನಿನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಎಂ.ಎಂ.ಆರ್.ಡಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾಋ ಕೋರಿರುವ ಪ್ರಕರಣಗಳು, ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ದ ದಾಖಲಾದ ಪ್ರಕರಣಗಳು, ಬ್ಯಾಂಕ್‍ಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣ, ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು, ಇತರೆ ಸಿವ್ಹಿಲ್ ವ್ಯಾಜ್ಯಗಳು ಹಾಗೂ ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಬ್ಯಾಂಕ್, ನೀರು ಮತ್ತು ವಿದ್ಯುತಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದ್ದು, ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*