ಗ್ರಾಮ ಮಟ್ಟದಲ್ಲಿ ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸಿ

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿಗಳು

ದೇವನಹಳ್ಳಿ

CHETAN KENDULI

ಪ್ರತಿಯೊಬ್ಬರು ನಮ್ಮ ಮಾತೃ ಭಾಷೆ ಕನ್ನಡ, ಸಾಹಿತ್ಯ ಮತ್ತು ಸಾಂಸ್ಕ್ರತಿಯನ್ನು ಉಳಿಸಿ ಬೆಳೆಸಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಆರ್.ಕೆ.ನಂಜೇಗೌಡ ತಿಳಿಸಿದರು.ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಗ್ರಾಮ ಶ್ರೀ ಮಂಜುನಾಥ ಪ್ರೌಢಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಮಾಸಿಕ ಸಿರಿಗನ್ನಡ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇಂದಿನ ಯುವ ಪೀಳಿಗೆ ವಿವಿಧ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ನಮ್ಮ ಮಾತೃಭಾಷೆ ಕನ್ನಡವಾಗಿದೆ. ನಮ್ಮ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಯುವ ಪೀಳಿಗೆ ಮುಂದಾಗಬೇಕು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದು ಇತರರಿಗೆ ಮಾದರಿಯಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ಶಾಲಾ ಹಂತದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ.ಎನ್.ಕೃಷ್ಣಪ್ಪ ಮಾತನಾಡಿ, ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ರಾಜ್ಯದಲ್ಲಿ ಕನ್ನಡವೇ ಪ್ರಧಾನ, ಕನ್ನಡ ಭಾಷೆಗೆ 8 ಜ್ಞಾನ ಪೀಠ ಪ್ರಶಸ್ತಿ ಬಂದಿದೆ. ಕನ್ನಡ ಭಾಷೆ ಸುಮಾರು ಶತಮಾನಗಳ ಹಿಂದೆಯೇ ಇತ್ತು ಎನ್ನುವುದಕ್ಕೆ ತಾಲೂಕಿನಲ್ಲಿ ಶಿಲಾಶಾಸನಗಳು ಸಾಕ್ಷಿಯಾಗಿವೆ. ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬಂತೆ ನಾವೀರಬೇಕು. ನಮ್ಮ ಪ್ರಾಚೀನ ಭಾಷೆಗೆ ಫಲ ಸಂಪತ್ತು ಇದೆ. ಕನ್ನಡವನ್ನು ಬರೆಯುವುದು, ಓದುವುದು ಈ ಭಾಷೆಗೆ ಮಾತ್ರ ಸಿಗುತ್ತದೆ. ನಮ್ಮ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹೃದಯದಿಂದ ಮಾತನಾಡುವ ಭಾಷೆಯಾಗಬೇಕು ನಮ್ಮ ಕನ್ನಡ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಸಾಪ ವತಿಯಿಂದ ವಿವಿಧ ರಂಗದ ಕಲಾವಿದರಿಗೆ ಸನ್ಮಾನ ಮಾಡಲಾಯಿತು.ಈ ವೇಳೆಯಲ್ಲಿ ಕರವೇ ಗೌರವಾಧ್ಯಕ್ಷ ಚಂದ್ರಶೇಖರ್, ಕಲಾವಿದರ ಸಂಘದ ಅಧ್ಯಕ್ಷ ಮೋಹನ್ ಬಾಬು, ಕರವೇ ಜಿಲ್ಲಾ ಕಾರ್ಯಾಧ್ಯಕ್ಷ ವಿನೋದ್ ಕುಮಾರ್, ಕಸಾಪ ಕೋಶಾಧ್ಯಕ್ಷ ಅಶ್ವತ್ಥ್ ಗೌಡ, ಹಿರಿಯ ಕಲಾವಿದರು, ಮುಖಂಡರು, ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*