ಕಾಂಗ್ರೆಸ್ ಪಕ್ಷದ ಜನಪರ ಕಾಳಜಿ ಹಲವು ಮುಖಂಡರ ಸೇರ್ಪಡೆ.

ವರದಿ ಗುರುಮೂರ್ತಿ ಬೂದಿಗೆರೆ

ಜಿಲ್ಲಾ ಸುದ್ದಿಗಳು

ದೇವನಹಳ್ಳಿ

CHETAN KENDULI

ಸದಾಶಿವರೆಡ್ಡಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಲವನ್ನು ಮತ್ತಷ್ಟು ಹೆಚ್ಚಿಸಿದಂತೆ ಆಗಿದೆ. ಅವರ ನಿರ್ಧಾರವನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ತಿಳಿಸಿದರು.ವಿಜಯಪುರದ ಚಿಕ್ಕಬಳ್ಳಾಪುರ ಮುಖ್ಯರಸ್ತೆಯಲ್ಲಿರುವ ಉದ್ಯಮಿ ಸದಾಶಿವರೆಡ್ಡಿ ಅವರ ಸ್ವಗೃಹದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿ, ನಾವು ದೇಶದ ಜಾತ್ಯಾತೀತ ವ್ಯವಸ್ಥೆಯ ಬುನಾದಿಯನ್ನು ಬಲಪಡಿಸಲು ಕೆಲಸ ಮಾಡಬೇಕು. ಕಾಂಗ್ರೆಸ್ ಧ್ಯೇಯ ಜನಸಾಮಾನ್ಯರಿಗೂ ತಿಳಿಯಬೇಕು. ನಮಗೆ ನಮ್ಮ ಇತಿಹಾಸ ಇದೆ, ಸಿದ್ಧಾಂತ ಇದೆ. ನಮ್ಮ ಯುವ ಪೀಳಿಗೆಯನ್ನು ಸಂಘಟನೆ ಮಾಡಿದರೆ, ಈ ರಾಜ್ಯ ಹಾಗೂ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದ್ಯಾವರಹಳ್ಳಿ ವಿ. ಶಾಂತಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳು ಹಾಗೂ ಇತರೆ ಪಕ್ಷಗಳು ಮಾಡಿದ ಜನ ವಿರೋಧಿ ನೀತಿಗಳು ಜನರಿಗೆ ಈಗ ಮನದಟ್ಟಾಗಿದೆ. ಬೆಲೆ ಏರಿಕೆಯ ಬಿಸಿ ಜನರನ್ನು ಹೈರಾಣಾಗಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಜನರು ನೆಮ್ಮದಿ ಇಂದ ಜೀವನ ಮಾಡುತ್ತಿದ್ದರು ಎಂಬುದು ಸಾಬೀತಾಗಿದೆ. ಕಾಂಗ್ರೆಸ್ ಪಕ್ಷದ ಧ್ಯೇಯ, ಉದ್ದೇಶಗಳು, ಸಿಗುವ ಸ್ಥಾನ ಮಾನ ಇತರರನ್ನು ಕಾಂಗ್ರೆಸ್ ಪಕ್ಷದ ಕಡೆ ತಿರುಗಿ ನೋಡುವಂತೆ ಮಾಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್ ಗೌಡ, ಸದಸ್ಯ ಚಿನ್ನಪ್ಪ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಎ.ಪಿ.ಎಂ.ಸಿ ಉಪಾಧ್ಯಕ್ಷ ಸುಧಾಕರ್, ಮುಖಂಡರಾದ ಬಚ್ಚೇಗೌಡ, ವೆಂಕಟೇಶ್, ಮತ್ತಿತರರು ಇದ್ದರು.

Be the first to comment

Leave a Reply

Your email address will not be published.


*