ಜಿಲ್ಲಾ ಸುದ್ದಿಗಳು
ಕಾರವಾರ:
ಜು.16 ಕೈ ಕಾರವಾರಕ್ಕೆ ಮುಖ್ಯ ಮಂತ್ರಿಗಳು ಬರುವ ಕಾರ್ಯಕ್ರಮ ಮುಂದಕ್ಕೆ 16 ಹೋಗಿರುವುದರಿಂದ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಮುಖ್ಯಮಂತ್ರಿ ಗಮನ ಸೆಳೆಯುವ ಉದ್ದೇಶದಿಂದ ಅಂದು ಕಾರವಾರದಲ್ಲಿ ಅರಣ್ಯವಾಸಿಗಳ ಬೃಹತ್ ಪ್ರತಿಭಟನೆ ಘೋಷಿಸಿರುವ ಅರಣ್ಯವಾಸಿಗಳ ಪ್ರತಿಭಟನೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಸಿಬ್ಬಂದಿಗಳಿಂದ ನಿರಂತರ ಅರಣ್ಯವಾಸಿಗಳ ಮೇಲೆ ದೌರ್ಜನ್ಯ, ಕಿರುಕುಳ, ಸಾಗುವಳಿಗೆಗೆ ಆತಂಕ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸ್ವತಃ ವಿಧಾನ ಸಭೆ ಅಧಿವೇಶನದಲ್ಲಿ ಮುಖ್ಯ ಮಂತ್ರಿಗಳೇ ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾಗಿಯೂ ಜಿಲ್ಲೆಯಲ್ಲಿ ಅರಣ್ಯ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ಕಿರುಕುಳವನ್ನು ಮುಖ್ಯಮಂತ್ರಿ ಗಮನಕ್ಕೆ ತರುವ ಉದ್ದೇಶದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದು ಇರುತ್ತದೆ.
ಮುಂದಿನ ಮುಖ್ಯಂತ್ರಿಗಳ ಕಾರ್ಯಕ್ರಮ ನಿಗದಿಗೊಳಿಸಿದ ನಂತರ ಹೋರಾಟದ ರೂಪ ರೇಷೆಯನ್ನು ಪ್ರಕಟಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment