ಎಸ್.ಎಸ್.ಎಲ್.ಸಿ. ಪರೀಕ್ಷಾ ವಿದ್ಯಾರ್ಥಿಗಳಿಗೆ 12 ಸಾವಿರ ಮಾಸ್ಕ್ ನೀಡಿದ ಕೆ.ಎಫ್.ಸಿ.ಎಸ್.ಸಿ. ಅಧ್ಯಕ್ಷ ಎ. ಎಸ್. ಪಾಟೀಲ್ ನಡಹಳ್ಳಿ….!!!

ಅಂಬಿಗ್ ನ್ಯೂಸ್

ಜಿಲ್ಲಾ ಸುದ್ದಿಗಳು

ಮುದ್ದೇಬಿಹಾಳ:

CHETAN KENDULI

ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸುತ್ತಿರುವ ಮುದ್ದೇಬಿಹಾಳ, ತಾಳಿಕೋಟೆ ತಾಲೂಕುಗಳ ಎಲ್ಲ ಮಕ್ಕಳಿಗೆ ಮಾಸ್ಕ್ ತಲುಪುವಂತೆ ನೋಡಿಕೊಳ್ಳಬೇಕು ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಸೂಚಿಸಿದರು.

ಶನಿವಾರ ತಮ್ಮ ಗೃಹ ಕಚೇರಿ ದಾಸೋಹ ನಿಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವೈ.ಜೇವರಗಿ, ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ಆರ್.ರಾಠೋಡ ಅವರಿಗೆ ತಮ್ಮ ಸ್ವಂತ ಹಣದಲ್ಲಿ ಖರೀದಿಸಿದ 12000 ತ್ರೀ ಪ್ಲೈ ಸರ್ಜಿಕಲ್ ಮಾಸ್ಕ್ ಹಸ್ತಾಂತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಸರ್ಕಾರದ ಸೂಚನೆ ಅನುಸಾರ ಈ ಬಾರಿ ಎರಡೂ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ, ಸಂಬಂಧಿಸಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರನ್ನು ಮುಂಚಿತವಾಗಿಯೇ ಸಂಪರ್ಕಿಸಿ ಆಯಾ ಕೇಂದ್ರಕ್ಕೆ ಎಷ್ಟು ಅಗತ್ಯವೋ ಅಷ್ಟು ಪ್ರಮಾಣದಲ್ಲಿ ಮಾಸ್ಕ್ಗಳನ್ನು ನೀಡಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತಲುಪುವಂತೆ ಮುತುವರ್ಜಿ ವಹಿಸಬೇಕು ಎಂದರು.

ಜು.19 ಮತ್ತು 22 ರಂದು ಎರಡು ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿ ಸೇರಿ ಒಟ್ಟಾರೆ 5500-6000 ವರೆಗೆ ಸಂಖ್ಯೆ ಇದೆ. ಎಲ್ಲರಿಗೂ ತಲಾ ಎರಡೆರಡು ಮಾಸ್ಕ್ ವಿತರಿಸಿ ಅನುಕೂಲ ಮಾಡಿಕೊಡಲಾಗುತ್ತದೆ. ಸಂಬಂಧಿಸಿದ ಶಿಕ್ಷಣ ಸಂಯೋಜಕರು, ಸಿಆರ್ಪಿ, ಬಿಆರ್ಬಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಸ್ಕೌಟ್ಸ್ ಗೈಡ್ಸ್ ಪದಾಧಿಕಾರಿಗಳ ನೆರವು ಪಡೆದುಕೊಂಡು ಮುಂಚಿತವಾಗಿಯೇ ಎಲ್ಲರಿಗೂ ತಲುಪಿಸಲು ಕ್ರಮ ಕೈಕೊಳ್ಳುವುದಾಗಿ ಬಿಇಓ ಜೇವರಗಿ ಭರವಸೆ ನೀಡಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿರುವ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಹಿರಿಯ ಉಪಾಧ್ಯಕ್ಷರಾದ ಡಿ.ಬಿ.ವಡವಡಗಿ, ಮುಖ್ಯಾಧ್ಯಾಪಕರು ಸೇರಿ ಹಲವರು ಇದ್ದರು.

Be the first to comment

Leave a Reply

Your email address will not be published.


*