ಜಿಲ್ಲಾ ಸುದ್ದಿಗಳು
ಭಟ್ಕಳ
ತಾಲೂಕಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇಲ್ಲಿನ ಶಂಸುದ್ದೀನ್ ಸರ್ಕಲ್ ನೀರಿನಿಂದ ಜಲಾವೃತಗೊಂಡಿದೆ. ಶನಿವಾರ ತಡರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ವಿವಿಧ ರಸ್ತೆಗಳು, ಚೌಥನಿ ಗ್ರಾಮ ಸಂಪೂರ್ಣ ಜಲಾವೃತವಾಗಿವೆ.
ಪಟ್ಟಣದ ಶಂಸುದ್ದೀನ್ ವೃತ್ತದಲ್ಲಿ ನೀರು ಹರಿಯದೇ ಜಲಾವೃತಗೊಂಡಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಅಸಮರ್ಪಕವಾಗಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ತಾಲ್ಲೂಕಿನ ಗ್ರಾಮೀಣ ಭಾಗದಲ್ಲೂ ಮಳೆ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದೆ.
ಇದರಿಂದ ಹಲವು ಕಡೆ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದು, ಇದರಿಂದ ವಾಹನ ಸವಾರರಿಗೆ ಹಾಗೂ ಪಾದಾಚಾರಿಗಳಿಗೆ ಬಾರಿ ಕಿರಿಕಿರಿ ಉಂಟಾಗಿದೆ ಮತ್ತು ಜನಜೀವನ ಅಸ್ತವ್ಯಸ್ತವಾಗಿದೆ.ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿ ಜನರಿಗೆ ನಷ್ಟ ಉಂಟಾಗಿದೆ.
Be the first to comment