ಅರಬ್ಬೀ ಸಮುದ್ರದಲ್ಲಿ ಅಲೆಯಬ್ಬರಕ್ಕೆ ಮಗುಚಿದ ದೋಣಿ; 10ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿಗಳು

 ಭಟ್ಕಳ

CHETAN KENDULI

ಅರಬ್ಬಿ ಸಮುದ್ರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಯ ರಭಸಕ್ಕೆ ಸಿಲುಕಿದ್ದ 10ಕ್ಕೂ ಹೆಚ್ಚು ಮೀನುಗಾರರನ್ನು ಭಟ್ಕಳ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ರಕ್ಷಿಸಲಾಗಿದೆ.

ಅಬ್ಬರದ ಮಳೆಯಿಂದಾಗಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಲು ನಿರ್ಬಂಧವಿದ್ದರೂ, ಮೀನುಗಾರರು ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ. ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಸಹಿತ ಅಬ್ಬರದ ಮಳೆಯಾಗಿದ್ದರಿಂದ ಮೀನುಗಾರರು ಅಲೆಯ ರಭಸಕ್ಕೆ ವಾಪಸ್ ಬರಲಾಗದೆ ತೊಂದರೆ ಗೊಳಗಾಗಿದ್ದರು. ಇನ್ನು ಹಲವು ಪಾತಿ ದೋಣಿಗಳು ಅಲೆಯ ಹೊಡೆತಕ್ಕೆ ಪಲ್ಟಿಯಾಗಿವೆ. ತಕ್ಷಣ ದಡದಲ್ಲಿದ್ದ ಸ್ಥಳೀಯ ಮೀನುಗಾರರು ಇದನ್ನು ಗಮನಿಸಿ ಗಿಲ್ಲೆಟ್ ದೋಣಿ ಮೂಲಕ ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಮೀನುಗಾರರು ಭಟ್ಕಳದ ಮುಂಡಳ್ಳಿ, ಬೆಳ್ನಿ ಭಾಗದವರಾಗಿದ್ದಾರೆ ಎಂದು ಹೇಳಲಾಗಿದೆ.

Be the first to comment

Leave a Reply

Your email address will not be published.


*