ಭಟ್ಕಳದಲ್ಲಿ ಇಂದು ಭಾರತೀಯ ಜನತಾ ಪಾರ್ಟಿಭಟ್ಕಳ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿಗಳು

ಭಟ್ಕಳ

CHETAN KENDULI

ಬಿಜೆಪಿ ಭಟ್ಕಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಇಂದು ನಗರದ ಆಸರಕೇರಿ ನಾಮಧಾರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮವನ್ನು ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಸಹಪ್ರಭಾರಿ ಪ್ರಸನ್ನ ಕೆರೆಕೈ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು ಪಕ್ಷದ ಶಿಶ್ತು ಹಾಗೂ ಕೃಷಿ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಮಂಡಲದ ಅಧ್ಯಕ್ಷರಾದ ಸುಬ್ರಾಯ ದೇವಾಡಿಗರವರು ಕಾರ್ಯಕಾರಣಿ ಬಗ್ಗೆ ಪ್ರಾಸ್ತಾವಿಕ ಮಾತನಾಡಿ ಕರೋನ ಸಂದರ್ಭದಲ್ಲಿ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದ ಕಾರ್ಯಕರ್ತರನ್ನು ಅಭಿನಂದಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗೋವಿಂದ ನಾಯ್ಕ ಅವರು ಹಾಗೂ ಚಂದ್ರು ಎಸಳೆ ಅವರು ಮಾತನಾಡಿ ಪಕ್ಷದ ಸಂಘಟನೆ ಹಾಗೂ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲ ಪ್ರಭಾರಿಗಳಾದ ಪ್ರಶಾಂತ್ ನಾಯ್ಕ, ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಭಾರಿಗಳಾದ ಈಶ್ವರ ನಾಯ್ಕ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಾನಿ ಶಾಂತಾರಾಮ್, ನಿಕಟಪೂರ್ವ ಅಧ್ಯಕ್ಷರಾದ ರಾಜೇಶ್ ನಾಯ್ಕ, ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ,ಎಸ್ ಟಿ ಮೋರ್ಚಾ ಕಾರ್ಯದರ್ಶಿ, ಯುವಮೋರ್ಚಾ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.


ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ನಾಯ್ಕ ಅವರು ಸರ್ವರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ವಂದನಾರ್ಪಣೆ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಭಾಸ್ಕರ್ ದೈಮನೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಮಂಡಲದ ಜಿಲ್ಲಾ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಪ್ರಭಾರಿಗಳು,ಜಿಲ್ಲಾ ಮತ್ತು ಮಂಡಲದ ಪ್ರಕೋಸ್ಟ್ ಸಂಚಾಲಕರು ಮತ್ತು ಸಹಸಂಚಾಲಕರು . ಮಂಡಲದ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನಕಾರ್ಯದರ್ಶಿಗಳು,ಮಂಡಲದ ಮಹಾಶಕ್ತಿಕೇಂದ್ರ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಶಕ್ತಿ ಕೇಂದ್ರ ಪ್ರಮುಖರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಪುರಸಭೆ ಸದಸ್ಯರು ಹಾಜರಿದ್ದರು.

Be the first to comment

Leave a Reply

Your email address will not be published.


*